ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ನೀಡಿದ್ದ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜುಲೈ 8ರವರೆಗೂ ಬಂಧಿಸಿದಂತೆ ಹೈಕೋರ್ಟ್ ಶುಕ್ರವಾರ ಆದೇಶ ನೀಡಿದೆ.
ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಗುರುವಾರ ಎನ್. ರವಿ ಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಶಾಲಿನಿ ರಜನೀಶ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜೆಪಿ ನಗರದ ನಂದಾದೀಪ ಮಹಿಳಾ ಸಂಘದ ಅಧ್ಯಕ್ಷೆ ನಾಗರತ್ನ ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ರವಿಕುಮಾರ್ ವಿರುದ್ಧ ಎಫ್ ಐಆರ್ ದಾಖಲಿಸಿದ್ದರು.
ಈ ಎಫ್ಐಆರ್ ಪ್ರಶ್ನಿಸಿ ರವಿಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಜುಲೈ 8ರವರೆಗೂ ರವಿಕುಮಾರ್ ಅವರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ, ಬಂಧಿಸದಂತೆ ಪೊಲೀಸರಿಗೆ ಸೂಚಿಸಿ ಹೈಕೋರ್ಟ್ ಆದೇಶ ನೀಡಿದೆ.