ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜನಸಾಮಾನ್ಯರ ಮೇಲೆ ಬೆಲೆ ಏರಿಕೆಯ ಹೊರೆ ಹಾಕುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕರಾದ ಆರ್.ಅಶೋಕ್ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಬಿಜೆಪಿ ನಿಯೋಗವು ಬಿಬಿಎಂಪಿ ಆಯುಕ್ತರಿಗೆ ಮನವಿ ಸಲ್ಲಿಸಿತು.
ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್, ಮಾಜಿ ಸಚಿವರಾದ ಕೆ.ಗೋಪಾಲಯ್ಯ, ಶಾಸಕರಾದ ರವಿ, ಎಸ್. ರಘು, ಎಸ್. ಮುನಿರಾಜು, ಗೋಪಿನಾಥ್ ರೆಡ್ಡಿ, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥ ನಾರಾಯಣ, ಜಿಲ್ಲಾಧ್ಯಕ್ಷರಾದ ಎಸ್. ಹರೀಶ್, ಸಪ್ತಗಿರಿ ಗೌಡ ಮತ್ತು ಪ್ರಮುಖರು ಉಪಸ್ಥಿತರಿದ್ದರು.