ಕಾಂಗ್ರೆಸ್‌ ವಿರುದ್ಧ ಬ್ಯಾಡ್‌ ಬೆಂಗಳೂರು ಪೋಸ್ಟರ್‌ಗಳನ್ನು ಪ್ರದರ್ಶಿಸಿದ ಬಿಜೆಪಿ ನಾಯಕರು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:  
ಧಾರಾಕಾರ ಮಳೆಯಿಂದಾಗಿ ಬೆಂಗಳೂರಿನ ಜನಜೀವನ ಅಸ್ತವ್ಯಸ್ತಗೊಂಡ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ,
ಪ್ರತಿಪಕ್ಷ ನಾಯಕರಾದ ಆರ್.ಅಶೋಕ್, ವಿಧಾನ ಪರಿಷತ್‌ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಇಂದು ಸಿಲ್ಕ್‌ಬೋರ್ಡ್‌ನಲ್ಲಿ ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ವಸ್ತುಸ್ಥಿತಿ ಪರಿಶೀಲಿಸಿದರು.

- Advertisement - 

ಬಳಿಕ ರಾಜ್ಯ ಕಾಂಗ್ರೆಸ್‌ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷವಾದರೂ ಅಭಿವೃದ್ಧಿ ಕಾರ್ಯ ಮಾಡದೆ ಕೇವಲ ಭ್ರಷ್ಟಾಚಾರ, ಹಗರಣ ಮತ್ತು ಬೆಲೆಯೇರಿಕೆಯಲ್ಲೇ ಸಾಧನೆಗೈದ ಕಾಂಗ್ರೆಸ್‌ವಿರುದ್ಧ ಬ್ಯಾಡ್‌ಬೆಂಗಳೂರು ಪೋಸ್ಟರ್‌ಗಳನ್ನು ಪ್ರದರ್ಶಿಸಿದರು.

- Advertisement - 

ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್, ಶಾಸಕರು, ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.

 

- Advertisement - 

Share This Article
error: Content is protected !!
";