ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಆರ್. ಮಂಜುನಾಥ್ ಅವರ ನೇತೃತ್ವದಲ್ಲಿ ಬೆಂಗಳೂರು ನಗರಕ್ಕೆ ಹೊಂದಿಕೊಂಡಿರುವ ವರ್ತೂರು ಬ್ಲಾಕ್ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಕಾಂಗ್ರೆಸ್ ಸರ್ಕಾರ ನೀಡಿರುವ ಐದು ಗ್ಯಾರಂಟಿ ಯೋಜನೆಗಳು ವಿರೋಧ ಪಕ್ಷಗಳಲ್ಲಿ ತಲ್ಲಣ ಸೃಷ್ಠಿಸಿವೆ. ಹಾಗಾಗಿ ವಿರೋಧ ಪಕ್ಷಗಳು ಸಾಕಷ್ಟು ಮುಖಂಡರು, ಕಾರ್ಯಕರ್ತರುಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷ ಸೇರುತ್ತಿರುವುದು ನೋಡಿದರೆ ಮುಂದಿನ ಅವಧಿಗೂ ಕಾಂಗ್ರೆಸ್ ಆಡಳಿತ ನಿಶ್ಚಿತ ಎನ್ನಬಹುದು ಎಂದು ಆರ್.ಮಂಜುನಾಥ್ ಹೇಳಿದರು.
ರಾಜ್ಯಾದ್ಯಂತ ಹಲವು ಪ್ರಾಂತ್ಯಗಳಲ್ಲಿ ಇತರೇ ಪಕ್ಷಗಳ ಮುಖಂಡರು ಕಾಂಗ್ರೆಸ್ ಪಕ್ಷದ ಸೇರ್ಪಡೆಗೆ ಉತ್ಸಾಹ ಹೆಚ್ಚುತ್ತಿದೆ ಎಂದು ಅವರು ತಿಳಿಸಿದರು.
ಈ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯ ಪ್ರಾಬಲ್ಯ ರಾರಾಜಿಸುತ್ತಿವೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದರು ಎಂದು ರಘು ಗೌಡ ಮಾಹಿತಿ ನೀಡಿದ್ದಾರೆ.