ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೆಟ್ರೋ ದರ ಏರಿಕೆ ಬಗ್ಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ ಗೂಬೆ ಕೂರಿಸಲು ಪ್ರಯತ್ನಿಸುತ್ತಿರುವ ಕರ್ನಾಟಕ ಬಿಜೆಪಿ ನಾಯಕರು ಅಜ್ಞಾನಿಗಳಂತೆ ನಟಿಸುತ್ತಿದ್ದಾರೆ! ಎಂದು ಕಾಂಗ್ರೆಸ್ ವಾಗ್ದಾಳಿ ಮಾಡಿದೆ.
ಮೆಟ್ರೋ ಕಾಯಿದೆ ಪ್ರಕಾರ ದರ ಏರಿಕೆ ಮಾಡಲು ಒಂದು ಸಮಿತಿ ಇರುತ್ತದೆ, ಸಮಿತಿಯ ಶಿಫಾರಸ್ಸನ್ನು ಮೆಟ್ರೋ ಮಂಡಳಿ ಸಭೆಯಲ್ಲಿ ಮಂಡಳಿಯ ಅಧ್ಯಕ್ಷರಾದ ಕೇಂದ್ರ ಸರ್ಕಾರದ ವಸತಿ ಮತ್ತುನಗರಾಭಿವೃದ್ಧಿ ಕಾರ್ಯದರ್ಶಿಗಳು ಅಂತಿಮಗೊಳಿಸುತ್ತಾರೆ. ಇದರಲ್ಲಿ ರಾಜ್ಯ ಸರ್ಕಾರದ ಪಾತ್ರವೇ ಇರುವುದಿಲ್ಲ ಎಂದು ಕಾಂಗ್ರೆಸ್ ತಾಕೀತು ಮಾಡಿದೆ.
ರಾಜ್ಯದಲ್ಲಿದ್ದ ಕಾಂಗ್ರೆಸ್ ಸರ್ಕಾರದ ಇಚ್ಛಾಶಕ್ತಿಯಿಂದ ಬೆಂಗಳೂರಿಗೆ ಬಂದ ಮೆಟ್ರೋ ಯೋಜನೆ ತಮ್ಮದೇ ಸಾಧನೆ ಎಂದು ಬಿಂಬಿಸಿಕೊಳ್ಳುವ ಸಣ್ಣತನ ತೋರುವ ಬಿಜೆಪಿಗರು ಈಗ ಕೇಂದ್ರದ ಮೆಟ್ರೋಬೆಲೆ ಏರಿಕೆಯನ್ನು ಕೋತಿ ತಿಂದು ಮೇಕೆ ಮೂತಿಗೆ ಒರೆಸಿತು ಎಂಬಂತೆ ಕಾಂಗ್ರೆಸ್ ಸರ್ಕಾರದ ತಲೆಗೆ ಕಟ್ಟುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದೆ.