ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯಕ್ಕೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕೇಂದ್ರ ಆರೋಗ್ಯ ಸಚಿವರಾದ ಜೆ.ಪಿ ನಡ್ಡಾ ಅವರನ್ನು ವಿಮಾನ ನಿಲ್ದಾಣದಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಮತ್ತಿತರ ಬಿಜೆಪಿ ನಾಯಕರು ಆತ್ಮೀಯವಾಗಿ ಸ್ವಾಗತಿಸಿ ಬರ ಮಾಡಿಕೊಂಡರು.
ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಚಲವಾದಿ ನಾರಾಯಣಸ್ವಾಮಿ, ಯುವಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಶಾಸಕರಾದ ಧೀರಜ್ ಮುನಿರಾಜು, ಮುಖಂಡರಾದ ಸಿ.ಮುನಿಕೃಷ್ಣ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.