ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಅಂಗವಾಗಿ ಇಂದು ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಸದಾಶಿವನಗರದ ಭಾಷ್ಯಂ ವೃತ್ತದಲ್ಲಿರುವ ಶಿವಾಜಿ ಮಹಾರಾಜರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಗೋಸಾಯಿ ಮರಾಠ ಮಠದ ಶ್ರೀ ಮಂಜುನಾಥ್ ಭಾರತಿ ಸ್ವಾಮೀಜಿ, ಮಾಜಿ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್, ಮಾಜಿ ಸಚಿವ ಕೆ.ಗೋಪಾಲಯ್ಯ, ಸಂಸದ ಪಿ.ಸಿ. ಮೋಹನ್, ವಿಧಾನ ಪರಿಷತ್‌ಸದಸ್ಯ ಸಿ.ಟಿ, ಎಂ.ಜಿ.ಮುಳೆ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ರಾಜ್ಯ ಮುಖ್ಯ ವಕ್ತಾರರಾದ ಅಶ್ವತ್ಥ ನಾರಾಯಣ, ಮಾಧ್ಯಮ ಪ್ರಕೋಷ್ಠದ ರಾಜ್ಯ ಸಂಚಾಲಕ ಕರುಣಾಕರ ಖಾಸಲೆ ಮತ್ತು ಪ್ರಮುಖರು ಉಪಸ್ಥಿತರಿದ್ದರು.

