ಕೋಮು ಭಾವನೆ ಕೆರಳಿಸಿ ಬೆಂಕಿ ಹಚ್ಚುವುದೇ ಬಿಜೆಪಿ ನಾಯಕರ ಕೆಲಸ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿಜೆಪಿಯವರಿಗೆ ಅಭಿವೃದ್ಧಿ ಬಗ್ಗೆ ಚಿಂತೆ ಇಲ್ಲ. ಕೋಮು ಭಾವನೆ ಕೆರಳಿಸಿ, ಜನರನ್ನು ವಿಭಜಿಸಿ ಬೆಂಕಿ ಹಚ್ಚುವುದೇ ಬಿಜೆಪಿ ನಾಯಕರ ಕೆಲಸವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆರೋಪಿಸಿದರು.

ಸದಾಶಿವನಗರ ನಿವಾಸದಲ್ಲಿ ಬುಧವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮದ್ದೂರು ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದಿದ್ದು ಅದರ ಬೆನ್ನಲ್ಲೇ ಬಿಜೆಪಿ ನಾಯಕರು ಮದ್ದೂರಿಗೆ ತೆರಳಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಡಿಸಿಎಂ ಮಾತನಾಡಿ, ಈಗಾಗಲೇ ಸಿಎಂ, ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಈ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಸಂಪೂರ್ಣ ಮಾಹಿತಿ ಸಿಗದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ತಿಳಿಸಿದರು.

- Advertisement - 

ಬಿಜೆಪಿಯವರಿಗೆ ರಾಜಕಾರಣ ಮಾಡುವುದು ಬಿಟ್ಟು ಬೇರೆ ಕೆಲಸ ಏನಿದೆ? ಅವರು ದೆಹಲಿಗೆ ಹೋಗಿ ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲು, ನರೇಗಾ ಅನುದಾನ, ಮೇಕೆದಾಟು, ಮಹದಾಯಿ ನೀರಾವರಿ ಯೋಜನೆಗಳಿಗೆ ಅನುಮತಿ ತೆಗೆದುಕೊಂಡು ಬರಲಿ ಎಂದು ಡಿಸಿಎಂ ಸವಾಲ್ ಹಾಕಿದರು.

ನೂತನ ಐದು ಪಾಲಿಕೆಗಳಿಗೆ ಉಸ್ತುವಾರಿ ಸಚಿವರ ನೇಮಕದ ಕುರಿತು ಮಾತನಾಡಿದ ಡಿಸಿಎಂ, ಮಂತ್ರಿಗಳು ಎಂದ ಮೇಲೆ ಕೇವಲ ತಮ್ಮ ಕ್ಷೇತ್ರಗಳ ಕೆಲಸ ಮಾತ್ರ ನೋಡುವುದಷ್ಟೇ ಅಲ್ಲ. ಇಡೀ ಜಿಲ್ಲೆ ಕಡೆ ಗಮನಹರಿಸಬೇಕು. ಕೆಲವು ಕಡೆ ನಾವು ಸೋತಿರುವ ಕ್ಷೇತ್ರಗಳಿವೆ. ಆ ಕ್ಷೇತ್ರಗಳಲ್ಲಿ ಸಮನ್ವಯತೆ ಸಾಧಿಸಬೇಕು. ಹೀಗಾಗಿ ಸಚಿವರಿಗೆ ಜವಾಬ್ದಾರಿ ವಹಿಸಲಾಗಿದೆ. ಇದರ ಜೊತೆಗೆ ಪಕ್ಷದ ವತಿಯಿಂದಲೂ ಸಂಘಟನೆ ವಿಚಾರವಾಗಿ ಜವಾಬ್ದಾರಿ ನೀಡಲಾಗುವುದು ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.

- Advertisement - 

ಸತೀಶ್ ಸೈಲ್ ಬಂಧನ:
ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರ ಬಂಧನದ ವಿಚಾರ ಕುರಿತು ಪ್ರತಿಕ್ರಿಯೆ ನೀಡಿ ಡಿಸಿಎಂ
, ಸತೀಶ್ ಸೈಲ್ ಅವರ ಬಂಧನದ ಅವಶ್ಯಕತೆ ಇರಲಿಲ್ಲ. 2010ರಿಂದಲೇ ಈ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಕಾಂಗ್ರೆಸ್ ಶಾಸಕರ ಮೇಲೆ ಮಾತ್ರ ಗುರಿಯಾಗಿಸಿ ಇಂತಹ ದಾಳಿಗಳು ನಡೆಯುತ್ತಿವೆ. ಆ ಮೂಲಕ ಕಾಂಗ್ರೆಸ್ ನಾಯಕರಿಗೆ ತೊಂದರೆ ನೀಡುವ ಕೆಲಸ ನಡೆಯುತ್ತಿದೆ ಎಂದು ಅವರು ದೂರಿದರು.

ರಾಜ್ಯದ 24 ಮಕ್ಕಳನ್ನು ರಾಜಸ್ಥಾನದಲ್ಲಿ ನಡೆಯಲಿರುವ ರಾಷ್ಟ್ರೀಯ ಶಿಬಿರಕ್ಕೆ ಜವಾಹರ್ ಬಾಲ ಮಂಚ್ ವತಿಯಿಂದ ಕಳುಹಿಸಲಾಗುತ್ತಿದೆ. ನಾನೇ ಈ ಮಕ್ಕಳ ಪ್ರಯಾಣ ವೆಚ್ಚ ಭರಿಸಿ ಕಳುಹಿಸುತ್ತಿದ್ದೇನೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

 

 

Share This Article
error: Content is protected !!
";