ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದಲ್ಲಿ ಸಂವಿಧಾನ ಬಾಹಿರವಾಗಿ ಸರ್ಕಾರಿ ಗುತ್ತಿಗೆಗಳಲ್ಲಿ ಮುಸಲ್ಮಾನರಿಗೆ ಮೀಸಲಾತಿ ನೀಡಲಾಗಿದೆ. ಇದನ್ನು ಸಮರ್ಥಿಸುತ್ತಾ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಅಗತ್ಯವಿದ್ದರೆ ಸಂವಿಧಾನವನ್ನು ಬದಲಾಯಿಸುತ್ತೇವೆ ಎಂಬ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ತಿಳಿಸಿ ಆತಂಕ ವ್ಯಕ್ತಪಡಿಸಿದೆ.
ಇದು ಅತ್ಯಂತ ಗಂಭೀರವಾದ ವಿಷಯ. ಸಂವಿಧಾನವನ್ನು ಉಳಿಸುವ ಮಾತನಾಡುವ ಕಾಂಗ್ರೆಸ್ಸಿಗರು ಇಂದು ಅದೇ ಸಂವಿಧಾನವನ್ನೇ ಬದಲಾಯಿಸಲು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ರಾಷ್ಟೀಯ ಅಧ್ಯಕ್ಷರು ಹಾಗು ಕೇಂದ್ರ ಸಚಿವರಾದ ಜೆ ಪಿ ನಡ್ಡಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.