ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಕ್ಫ್ ನೋಟಿಸ್ಗಳ ವಿರುದ್ಧ ಸಿಡಿದೆದ್ದಿರುವ ಬಿಜೆಪಿ ಕರ್ನಾಟಕದಾದ್ಯಂತ ‘ನಮ್ಮ ಭೂಮಿ, ನಮ್ಮ ಹಕ್ಕು ಘೋಷಣೆಯಡಿ’ ಪ್ರತಿಭಟನೆ ನಡೆಸುತ್ತಿದೆ.
ಕೋಲಾರದಿಂದ ಮಂಗಳೂರಿನವರೆಗೆ, ಬೆಂಗಳೂರಿನಿಂದ ವಿಜಯಪುರದವರೆಗ ವಕ್ಫ್ ವಿವಾದ ವಿರೋಧಿಸಿ ಪ್ರತಿಭಟನೆಗಳಿದಿದೆ.
ಕೂಡಲೇ ಗೆಜೆಟ್ ನೋಟಿಫಿಕೇಷನ್ ರದ್ದು ಮಾಡಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ.
‘ರದ್ದಾಗಲಿ, ವಕ್ಫ್ ಬೋರ್ಡ್ ರದ್ದಾಗಲಿ’’ ಎಂಬ ಘೋಷಣೆ ಬಿಜೆಪಿ ಪ್ರತಿಭಟನೆ ವೇಳೆ ಎಲ್ಲೆಡೆ ಕೇಳಿಬಂತು. ರೈತರ ಜಮೀನು, ದೇವಸ್ಥಾನ ಸೇರಿದಂತೆ ಹಲವು ಆಸ್ತಿಗಳಲ್ಲಿ ವಕ್ಫ್ ಬೋರ್ಡ್ ಆಸ್ತಿ ಅಂತಾ ನಮೂದಾಗುತ್ತಿರುವುದನ್ನು ವಿರೋಧಿಸಿ ಬಿಜೆಪಿ ರಾಜ್ಯದ ಹಲವಡೆ ಪ್ರತಿಭಟನೆ ನಡೆಸಿತು.
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಮ್ಮ ಭೂಮಿ ನಮ್ಮ ಹಕ್ಕು ಘೋಷಣೆಯಡಿ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಲಾಯಿತು.
ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಿಜೆಪಿ ನಾಯಕರು, ರಾಜ್ಯ ಕಾಂಗ್ರೆಸ್‌ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.