ಡಿಸಿಎಂ ಡಿಕೆ ಶಿವಕುಮಾರ್ ರಾಜೀನಾಮೆ ಒತ್ತಾಯಿಸಿ ಪ್ರತಿಭಟನೆ ಮಾಡಿದ ಬಿಜೆಪಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಂವಿಧಾನ ಬದಲಾಯಿಸುವ ಹೇಳಿಕೆ ನೀಡಿರುವ ಉಪ ಮುಖ್ಯಮಂತ್ರಿ
, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ವಿರುದ್ಧ ಬಿಜೆಪಿ ಮಂಗಳವಾರ ತುಮಕೂರು ಸೇರಿದಂತೆ ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸಿ ಪ್ರತಿಕೃತಿ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಲಾಯಿತು.

ತುಮಕೂರು, ಮೈಸೂರು, ಹುಬ್ಬಳ್ಳಿ-ಧಾರವಾಡ ಮಹಾನಗರ, ಶಿವಮೊಗ್ಗ, ಹಾವೇರಿ ಸೇರಿದಂತೆ ಮತ್ತಿತರ ಜಿಲ್ಲೆಗಳಲ್ಲಿ ನಾನಾ ಕಡೆ ಅಂಬೇಡ್ಕರ್‌ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಡಿಕೆಶಿ ಅವರ ರಾಜೀನಾಮೆಗೆ ಆಗ್ರಹಿಸಿದರು.
ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ ಹಾಗೂ ಸಂವಿಧಾನ ಬದಲಾವಣೆ ಮಾಡುವ ಹೇಳಿಕೆ ನೀಡಿರುವ ಡಿ.ಕೆ ಶಿವಕುಮಾರ್ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. 
ಆಯಾಯ ಜಿಲ್ಲಾ ಬಿಜೆಪಿ ಘಟಕಗಳು, ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿ, ಕಾರ್ಯಕರ್ತರು ಆಕ್ರೋಶ ಹೊರಹಾಕಿದರು.

ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಅವರ ರಾಜೀನಾಮೆ ಪಡೆಯಬೇಕು ಎಂದು ಇದೇ ಸಂದರ್ಭದಲ್ಲಿ ಆಗ್ರಹಿಸಿದರು.
ಶಿವಕುಮಾರ್ ನೀಡಿರುವ ತಮ್ಮ ಹೇಳಿಕೆಯನ್ನು ಹಿಂದೆ ಪಡೆಯಬೇಕು
, ಸಿಎಂ ಸಿದ್ದರಾಮಯ್ಯ ಡಿಕೆಶಿ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇದೇ ವೇಲೆ ಅಲ್ಪಸಂಖ್ಯಾತರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಶೇ.4ರಷ್ಟು ಮೀಸಲಾತಿ ನೀಡುವ ಸರ್ಕಾರದ ನಿರ್ಧಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಇದು ತುಷ್ಠೀಕರಣದ ರಾಜಕೀಯ ಎಂದು ಆರೋಪಿಸಿದರು. ಬಿಜೆಪಿ ಶಾಸಕರು, ಮಾಜಿ ಶಾಸಕರು, ಮುಖಂಡರು, ಕಾರ್ಯಕರ್ತರು ಸೇರಿದಂತೆ ಮತ್ತಿತರರ ಮುಖಂಡರು ಪ್ರತಿಭಟನೆ ವೇಳೆ ಹಾಜರಿದ್ದರು.

 

Share This Article
error: Content is protected !!
";