ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಮುಡಾ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ತನಿಖೆಗೆ ತಮ್ಮ ವಿರುದ್ಧ ರಾಜ್ಯಪಾಲರು ನೀಡಿರುವ ಅನುಮತಿ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ನ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿದೆ. ಈ ಸಂಬಂಧ ಹೈಕೋರ್ಟ್ ತೀರ್ಪನ್ನು ಸ್ವಾಗತಿಸಲಾಗಿದೆ ಎಂದು ಆಂಧ್ರಪ್ರದೇಶದ ಬಿ.ಜೆ.ಪಿ ಎಂಎಲ್ಸಿ ಪೊಂಗುಲೆಟ್ಟಿ ಸುಧಾಕರ್ ರೆಡ್ಡಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿದರು.
ನಗರದ ಮಾರುಕಟ್ಟೆ ಚೌಕದಲ್ಲಿ ನಡೆದ ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಆದೇಶ ನೀಡಿದ ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿದ ಹೈಕೋರ್ಟ್ನ ತೀರ್ಪು ಸ್ವಾಗತಾರ್ಹ. ಈಗಾಲಾದರೂ ನೈತಿಕತೆಯ ಹೊಣೆ ಹೊತ್ತು ರಾಜೀನಾಮೆ ನೀಡಲಿ
ರಾಜ್ಯದಲ್ಲಿ ವಾಲ್ಮೀಕಿ ಹಗರಣ. ಮೂಡಹಗರಣ ಸೇರಿದಂತೆ ಹಗರಣಗಳಲ್ಲೇ ಸರಕಾರ ತುಂಬಿ ಹೋಗಿದೆ. ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಜನರು ಮುಂದಿನದಿನಗಳಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.
ಬಲಿಷ್ಠವಾದ ಆರ್ಥಿಕತೆಯ ಭಾರತ ನಿರ್ಮಾಣಕ್ಕಾಗಿ ಬಿಜೆಪಿ ಪಕ್ಷದ ಸದಸ್ಯತ್ವ ಪಡೆದು ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕು ಎಂದು ಸ್ಥಳೀಯವಾಗಿ ಬಿಜೆಪಿ ಪಕ್ಷದ ಶಾಸಕರಿದ್ದು ಲೋಕಸಭಾ ಕ್ಷೇತ್ರವು ಕೂಡ ಬಿಜೆಪಿಯ ಸಂಸದರು ಇದ್ದಾರೆ ಈ ನಿಟ್ಟಿನಲ್ಲಿ ಈ ಭಾಗದಲ್ಲಿ ಕಾರ್ಯಕರ್ಯರು ಅತ್ಯಂತ ಚುರಕಿನಿಂದ ಕಾರ್ಯನಿರ್ವಹಿಸಿ ಬಿಜೆಪಿ ಪಕ್ಷದ ಸದಸ್ಯತ್ವದ ಪ್ರಮಾಣವನ್ನು ಹೆಚ್ಚಿನ ರೀತಿಯಲ್ಲಿ ಮಾಡಬೇಕು. ಬಿಜೆಪಿ ಪಕ್ಷಕ್ಕೆ ದೇಶವೇ ಮೊದಲು ಈ ನಿಟ್ಟಿನಲ್ಲಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವ ಸದಸ್ಯರ ಸಂಖ್ಯೆ ಅಧಿಕವಾಗುತ್ತಿದೆ. ಆದರೇ ಕಾಂಗ್ರೆಸ್ ಪಕ್ಷದಲ್ಲಿ ಕುಟುಂಬ ಮೊದಲು ಎಂದು ವ್ಯಂಗವಾಡಿದರು.
ಶಾಸಕ ಧೀರಜ್ ಮುನಿರಾಜು ಮಾತನಾಡಿ, ಇಂದು ಹೈಕೋರ್ಟ್ ನೀಡುವ ಆದೇಶವು ವಿಜೇಯಂದ್ರ ನೇತೃತ್ವದ ನಡೆದ ಪಾದಯಾತ್ರಗೆ ಸಂದ ಜಯ. ಈ ಕೂಡಲೇ ಸಿದ್ದರಾಮಯ್ಯ ನೈತಿಕ ಹೊಣೆಹೊತ್ತು ರಾಜೀನಾಮೇ ನೀಡಬೇಕು ನಿನ್ನೆ ನಡೆದ ನಗರ ಸಭಾ ಚುನಾವಣೆ ಬಿಜೆಪಿಯ ಪಾಲಾಗಿದೆ ಈ ನಿಟ್ಟಿನಲ್ಲಿ ಸ್ಥಳೀಯವಾಗಿ ಪಕ್ಷವನ್ನು ಸಂಘಟಿಸಲು ಸಹ ಉತ್ತಮವಾದ ವಾತವರಣವಿದೆ ಎಂದು ಕಾರ್ಯಯರ್ತರಿಗೆ ಕರೆ ನೀಡಿದರು.
ಈ ವೇಳೆ ಬಿಜೆಪಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್, ನಗರ ಸಭಾ ಸದಸ್ಯರಾದ ಪದ್ಮನಾಭ್, ಭಾಸ್ಕರ್, ಮುಖಂಡರಾ. ವತ್ಸಲ, ಮುದ್ದಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.