ಚಂದ್ರವಳ್ಳಿ ನ್ಯೂಸ್, ದೆಹಲಿ:
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಯಾವುದೇ ಕಾರಣಕ್ಕೂ ಬದಲಾಗುವುದಿಲ್ಲ ಎಂದು ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ತಿಳಿಸಿದ್ದಾರೆ.
ದೆಹಲಿಯಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಜನವರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗುತ್ತಾರೆ ಅಂತ ಕುಮಾರ ಬಂಗಾರಪ್ಪ, ಜಿಎಂ ಸಿದ್ದೇಶ್ವರ ಮೊದಲಾದವರು ಹೇಳಿಕೊಂಡು ತಿರುಗಾಡುತ್ತಿರುವುದು ಶುದ್ಧ ಸುಳ್ಳು ಮತ್ತು ಊಹಾಪೋಹ ಮಾತ್ರ ಎಂದು ತಿಳಿಸಿದರು.
ರಾಜ್ಯಾಧ್ಯಕ್ಷ ವಿಜಯೇಂದ್ರರನ್ನು ಅಧ್ಯಕ್ಷ ಮಾಡಿದ್ದು ಯಡಿಯೂರಪ್ಪ ಅಲ್ಲ, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ಸಂತೋಷ್ ಮೊದಲಾದವರು. ವಿಜಯೇಂದ್ರರನ್ನು ಬದಲಾಯಿಸಲು ಕುಮಾರ ಬಂಗಾರಪ್ಪ ಯಾರು ಎಂದು ರೇಣುಕಾಚಾರ್ಯ ಪ್ರಶ್ನಿಸಿದರು.