ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
“ಜೈನ ಸಮುದಾಯದ ನ್ಯಾಯಸಮ್ಮತ ಹೋರಾಟಗಳಿಗೆ ಬಿಜೆಪಿ ಬೆಂಬಲ” ನೀಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭರವಸೆ ನೀಡಿದರು.
ಕರ್ನಾಟಕ ಸಮಸ್ತ ಜೈನ ಸಮಾಜದ ವಿವಿಧ ಸಂಘಟನೆಗಳ ಒಕ್ಕೂಟಗಳ ನೇತೃತ್ವದಲ್ಲಿ ಹಾಗೂ ಪರಮಪೂಜ್ಯ ರಾಷ್ಟ್ರ ಸಂತ ಆಚಾರ್ಯ ಶ್ರೀ 108 ಗುಣಧರ ನಂದಿ ಮುನಿ ಮಹಾರಾಜರ ದಿವ್ಯ ಸಾನಿಧ್ಯದಲ್ಲಿ ಜೈನ ಸಮಾಜದ ಅಭಿವೃದ್ಧಿಗಾಗಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೆಳಗಾವಿಯಲ್ಲಿ ನಡೆಯುತ್ತಿರುವ ಜೈನ ಸಮಾವೇಶದಲ್ಲಿ ಭಾಗವಹಿಸಿ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು.
ಸ್ವಾಭಿಮಾನ ಹಾಗೂ ಪ್ರಾಮಾಣಿಕತೆಗೆ ಮತ್ತೊಂದು ಹೆಸರಾಗಿರುವ ಜೈನ ಸಮುದಾಯದ ನ್ಯಾಯಸಮ್ಮತ ಹೋರಾಟಕ್ಕೆ ಸಂಪೂರ್ಣ ಬೆಂಬಲ ಸೂಚಿಸಿ ಬೇಡಿಕೆಗಳ ಈಡೇರಿಕೆಗೆ ಸರ್ಕಾರವನ್ನು ಒತ್ತಾಯಿಸಿ ಪ್ರಾಮಾಣಿಕವಾಗಿ ಶ್ರಮಿಸುವ ಭರವಸೆ ನೀಡಲಾಯಿತು.
ಈ ಸಂದರ್ಭದಲ್ಲಿ ರಾಷ್ಟ್ರ ಸಂತ ಆಚಾರ್ಯ ಶ್ರೀ 108 ಗುಣಧರ ನಂದಿ ಮುನಿ ಮಹಾರಾಜರು, ರಾಜ್ಯದ ವಿವಿಧ ಭಾಗಗಳ ಜೈನ ಮುನಿಗಳು, ಮಾಜಿ ಶಾಸಕರಾದ ಸಂಜಯ್ ಪಾಟೀಲ್, ಅವರು ಸೇರಿದಂತೆ ಸಮಾಜದ ಮುಖಂಡರು ಹಾಗೂ ಜೈನ ಸಮುದಾಯದ ಬಂಧುಗಳು ಉಪಸ್ಥಿತರಿದ್ದರು.