ಬಿಜೆಪಿ ನನ್ನ ಹೇಳಿಕೆ ತಿರುಚಿದೆ-ಡಿಕೆ ಶಿವಕುಮಾರ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿಜೆಪಿ ಹೇಳುತ್ತಿರುವಂತೆ ಸಂವಿಧಾನ ಬದಲಾವಣೆ ಬಗ್ಗೆ ನಾನು ಹೇಳಿಯೇ ಇಲ್ಲ, ನನ್ನ ಹೇಳಿಕೆಯನ್ನು ಬಿಜೆಪಿ ತಿರುಚಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.

ಕಳೆದ 36 ವರ್ಷಗಳಿಂದ ಶಾಸಕನಾಗಿ ವಿಧಾನಸಭೆಯಲ್ಲಿದ್ದೇನೆ. ನನಗೂ ಸಾಮಾನ್ಯ ಜ್ಞಾನವಿದೆ. ಇಂತಹ ವಿಚಾರದಲ್ಲಿ ಜೆ.ಪಿ ನಡ್ಡಾ ಅವರಿಗಿಂತಲೂ ನಾನು ಹೆಚ್ಚು ಸೂಕ್ಷ್ಮತೆ ಇರುವ ರಾಜಕಾರಣಿ ಎಂದು ಅವರು ತಿಳಿಸಿದ್ದಾರೆ.

ಆದರೆ ಬಿಜೆಪಿ ಜನಸಾಮಾನ್ಯರ ದಾರಿ ತಪ್ಪಿಸುತ್ತಿದೆ. ಸುಳ್ಳು ಹೇಳಿಕೆ ಸೃಷ್ಟಿಸಿ, ನನ್ನ ಹೆಸರನ್ನು ಎಳೆದು ತರಲಾಗುತ್ತಿದೆ. ತೀರ್ಪಿನ ಆಧಾರದ ಮೇಲೆ ನಾವು ಯೋಚಿಸುತ್ತೇವೆಎಂದು ಹೇಳಿದ್ದನ್ನು ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ತಿರುಚುತ್ತಿರುವ ಬಿಜೆಪಿ ನಾಯಕರ ಮೇಲೆ ಮತ್ತು ಸುಳ್ಳು ಸುದ್ದಿ ಹರಡುವವರು ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಡಿಸಿಎಂ ಶಿವಕುಮಾರ್ ಎಚ್ಚರಿಸಿದ್ದಾರೆ.
ಸಂವಿಧಾನ ಬದಲಾವಣೆ ಕುರಿತು ಬಿಜೆಪಿ ಮಾಡುತ್ತಿರುವ ಅಪಪ್ರಚಾರಕ್ಕೆ ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿಕೆ ಶಿವಕುಮಾರ್
ಅವರು ಸ್ಪಷ್ಟನೆ ನೀಡಿದ್ದಾರೆ.

ನಾನು ಹಾಗೆ ಹೇಳಿಯೇ ಇಲ್ಲ, ನನ್ನ ಹೇಳಿಕೆಯನ್ನು ಬಿಜೆಪಿ ತಿರುಚಿದೆ. ಕಳೆದ 36 ವರ್ಷಗಳಿಂದ ಶಾಸಕನಾಗಿ ವಿಧಾನಸಭೆಯಲ್ಲಿದ್ದೇನೆ. ನನಗೂ ಸಾಮಾನ್ಯ ಜ್ಞಾನವಿದೆ. ಇಂತಹ ವಿಚಾರದಲ್ಲಿ ಜೆ.ಪಿ ನಡ್ಡಾ ಅವರಿಗಿಂತಲೂ ನಾನು ಉತ್ತಮ ಸೂಕ್ಷ್ಮತೆ ಇರುವ ರಾಜಕಾರಣಿ. ಆದರೆ ಬಿಜೆಪಿ ಜನಸಾಮಾನ್ಯರ ದಾರಿ ತಪ್ಪಿಸುತ್ತಿದೆ. ನಮ್ಮದು ರಾಷ್ಟ್ರೀಯ ಪಕ್ಷ. ಸುಳ್ಳು ಹೇಳಿಕೆ ಸೃಷ್ಟಿಸಿ, ನನ್ನ ಹೆಸರನ್ನು ಎಳೆದು ತರಲಾಗುತ್ತಿದೆ. ನಾನು ಈ ಬಗ್ಗೆ ಎಲ್ಲಿಯೂ ಹೇಳಿಕೆ ನೀಡಿಲ್ಲ ಎಂದು ಡಿಸಿಎಂ ಶಿವಕುಮಾರ್ ಹೇಳಿದರು.

ನ್ಯಾಯಾಲಯಗಳ ತೀರ್ಪಿನ ಅನುಸಾರ ತಿದ್ದುಪಡಿ ತಂದಿರುವ ನಿದರ್ಶನವಿದೆ ಎಂದು ಹೇಳಿದ್ದೇನೆಯೇ ಹೊರತು, ಸಂವಿಧಾನವನ್ನು ಬದಲಾವಣೆ ಮಾಡುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ. ನನ್ನ ಹೇಳಿಕೆಯನ್ನು ತಿರುಚಿರುವ ಬಗ್ಗೆ ಕಾನೂನು ಹೋರಾಟ ಮಾಡುತ್ತೇನೆ.
ನಮ್ಮದು ರಾಷ್ಟ್ರೀಯ ಪಕ್ಷ
, ಸಂವಿಧಾನವನ್ನು ಜಾರಿಗೆ ತಂದಿದ್ದೇ ನಮ್ಮ ಪಕ್ಷ. ಸಂವಿಧಾನದ ಮಹತ್ವ ಬೇರೆಲ್ಲರಿಗಿಂತ ನಮಗೆ ಚೆನ್ನಾಗಿ ಗೊತ್ತಿದೆ. ಕೇಂದ್ರ ಸರ್ಕಾರ ತನ್ನ ಬಜೆಟ್ ನಲ್ಲಿ ವಿಫಲವಾಗಿದೆ. ಬಜೆಟ್ ನಲ್ಲಿ ಏನೂ ಇಲ್ಲದೇ ಇರುವ ಕಾರಣಕ್ಕೆ ಬಿಜೆಪಿ ಈ ರೀತಿ ಇಲ್ಲಸಲ್ಲದ ವಿಚಾರವನ್ನು ಪ್ರಸ್ತಾವ ಮಾಡುತ್ತಿದೆ. ಇದೊಂದು ನನ್ನ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಮುಂದುವರೆದಿರುವ ರಾಜಕೀಯ ಪಿತೂರಿ ಎಂದು ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

 

Share This Article
error: Content is protected !!
";