ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಳ್ಳಾರಿಯಲ್ಲಿ ಕಾಂಗ್ರೆಸ್ ಪಕ್ಷದ ಗೂಂಡಾಗಿರಿಗೆ ಬಲಿಯಾದ ರಾಜಶೇಖರ ರೆಡ್ಡಿ ಅವರ ನಿವಾಸಕ್ಕೆ ಭೇಟಿ ನೀಡಿ, ಶೋಕತಪ್ತ ಕುಟುಂಬದವರಿಗೆ ಸಾಂತ್ವನ ಹೇಳಿ, ಬಿಜೆಪಿ ವತಿಯಿಂದ 10 ಲಕ್ಷ ರೂ.ಗಳ ಆರ್ಥಿಕ ನೆರವು ನೀಡಲಾಯಿತು ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂಬುದಕ್ಕೆ ಈ ರಕ್ತಸಿಕ್ತ ಘಟನೆಯೇ ಸಾಕ್ಷಿ. ಸಹಾಯಧನ ಆ ನೊಂದ ಕುಟುಂಬಕ್ಕೆ ತಾತ್ಕಾಲಿಕ ಪರಿಹಾರ ನೀಡಬಹುದೇ ಹೊರತು ಕಳೆದುಕೊಂಡ ಜೀವವನ್ನು ಮರಳಿ ತರಲಾರದು. ಆ ಸಂತ್ರಸ್ತ ಕುಟುಂಬಕ್ಕೆ ಸಿಗಬೇಕಾದ ನಿಜವಾದ ನ್ಯಾಯವೆಂದರೆ ಈ ಪ್ರಕರಣದ ನಿಷ್ಪಕ್ಷಪಾತ ತನಿಖೆ ಎಂದು ಅವರು ತಿಳಿಸಿದರು.
ಸ್ಥಳೀಯ ಪೊಲೀಸರ ಮೇಲೆ ಸರ್ಕಾರದ ಒತ್ತಡವಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಆದ್ದರಿಂದ ಈ ಪ್ರಕರಣದ ಸಮಗ್ರ ಸತ್ಯಾಂಶ ಹೊರಬರಲು ಕೂಡಲೇ CBI ತನಿಖೆಗೆ ಒಪ್ಪಿಸಬೇಕು ಎಂಬುದು ನಮ್ಮ ಆಗ್ರಹ ತಪ್ಪಿತಸ್ಥರು ಎಷ್ಟೇ ಪ್ರಭಾವಿಯಾಗಿದ್ದರೂ ಅವರಿಗೆ ಶಿಕ್ಷೆಯಾಗುವವರೆಗೂ ನಾವು ವಿಶ್ರಮಿಸುವುದಿಲ್ಲ.
ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಗೋವಿಂದ ಕಾರಜೋಳ, ಶಾಸಕ ಗಾಲಿ ಜನಾರ್ಧನ ರೆಡ್ಡಿ, ಮಾಜಿ ಸಚಿವ ಬಿ.ಶ್ರೀರಾಮುಲು ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

