ಚಂದ್ರವಳ್ಳಿ ನ್ಯೂಸ್, ಹಿರಿಯೂರು :
ದೇಶದಾದ್ಯಂತ ಭಾರತೀಯ ಜನತಾ ಪಕ್ಷದ ಸಂಘಟನಾ ಪರ್ವ ಕಾರ್ಯಕ್ರಮ ನಡೆಯುತ್ತಿದ್ದು ಹಿರಿಯೂರು ಮಂಡಲದಲ್ಲಿ ಯುವ ಮೋರ್ಚಾ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದೆ ಎಂದು ಭಾರತೀಯ ಜನತಾ ಪಕ್ಷ ಹಿರಿಯೂರು ಮಂಡಲದ ಅಧ್ಯಕ್ಷ ಅಭಿನಂದನ್ ಹೇಳಿದರು.
ಈ ಹೊಣೆಗಾರಿಕೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುತ್ತಾ ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಸದೃಢಗೊಳಿಸುತ್ತಾ ಮುಂಬರುವ ಎಲ್ಲಾ ರೀತಿಯ ಸವಾಲುಗಳನ್ನು ಎದುರಿಸುವ ಶಕ್ತಿ ತುಂಬುತ್ತಾ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಲ್ಲಿ ಸತತ ಶ್ರಮಿಸಬೇಕೆಂದು ನೂತನ ಪದಾಧಿಕಾರಿಗಳಿಗೆ ತಿಳಿಸಿದರು.
ಉಪಾಧ್ಯಕ್ಷರುಗಳಾಗಿ ಕೆ.ಕೃಷ್ಣ, ಸೀತಾರಾಮ್, ಶಶಿಕುಮಾರ್ ಪಿ, ಎಂ ನಾಗರಾಜ್, ಮಿಥುನ್ ಕೃಷ್ಣ, ಜಿ.ಸಿ ಸಿದ್ದೇಶ್ ಹಾಗೂ ಕಾರ್ಯದರ್ಶಿಗಳಾಗಿ ಪ್ರೀತಮ್, ಎಸ್ ಶಿವ, ವಿಷ್ಣು, ಬೈರೇಶ್ ಕೆ ಎಸ್, ಕಿರಣ್, ಶಶಿಕುಮಾರ್ ಹಾಗೂ 21 ಜನ ಕಾರ್ಯಕಾರಿಣಿ ಸದಸ್ಯರನ್ನು ಆಯ್ಕೆ ಮಾಡಿರುತ್ತಾರೆ.
ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷ ಯುವ ಮೋರ್ಚಾ ಅಧ್ಯಕ್ಷ ಕೆ.ಟಿ ಹನುಮಂತ ಮತ್ತಿತರರು ಉಪಸ್ಥಿತರಿದ್ದರು.

