ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಳೆದ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಅಮಾನತುಗೊಂಡಿದ್ದ 18 ಶಾಸಕರು, ಅಮಾನತು ವಾಪಸ್ಸಾತಿಗೆ ಮನವಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಭಾನುವಾರ ವಿಧಾನಸಭೆಯ ಅಧ್ಯಕ್ಷ ಯು.ಟಿ. ಖಾದರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ, ಸಚಿವರು ಹಾಗೂ ವಿಪಕ್ಷ ನಾಯಕರು ಭಾಗವಹಿಸಿದ್ದರು.
ಬಿಜೆಪಿ ಶಾಸಕರ ಅಮಾನತು ಸಂಬಂಧ ಚರ್ಚಿಸಲು ವಿಧಾನಸಭೆ ಅಧ್ಯಕ್ಷರಾದ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಿತು.
ಎರಡು ತಿಂಗಳ ನಂತರ ಅಮಾನತು ಆದೇಶ ವಾಪಸ್ ಪಡೆಯಲು ನಿರ್ಣಯ ಮಾಡಲಾಯಿತು.
ಕಾನೂನು ಸಚಿವ ಹೆಚ್.ಕೆಪಾಟೀಲ್, ಪ್ರತಿಪಕ್ಷ ನಾಯಕ ಆರ್.ಅಶೋಕ್, ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಜರಿದ್ದರು.