ಬಿಜೆಪಿಯ ತಳಮಟ್ಟದ ಕಾರ್ಯಕರ್ತರೇ ಪಕ್ಷದ ಆಧಾರ ಸ್ತಂಭ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿ.ಎಲ್.ಎ-1 ರಾಜ್ಯ ಮಟ್ಟದ ಕಾರ್ಯಾಗಾರದ ಉದ್ಘಾಟನೆ. ಪಕ್ಷದ ಸಂಘಟನೆಯನ್ನು ಪ್ರಾಥಮಿಕ ಹಂತದಿಂದ ಮತ್ತಷ್ಟು ಕ್ರಿಯಾಶೀಲಗೊಳಿಸಲು, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಬೆಂಗಳೂರಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಆಯೋಜಿಸಿರುವ ಪಕ್ಷದ ರಾಷ್ಟ್ರೀಯ ಶಿಸ್ತು ಸಮಿತಿಯ ಪ್ರಮುಖರು ಹಾಗು ಸದಸ್ಯ ಕಾರ್ಯದರ್ಶಿ ಓಂ ಪಾಠಕ್ ಅವರ ನೇತೃತ್ವದಲ್ಲಿ ನಡೆದ ಬಿ.ಎಲ್.ಎ-1 ರಾಜ್ಯ ಮಟ್ಟದ ಕಾರ್ಯಾಗಾರದ ಉದ್ಘಾಟನೆ ನೆರವೇರಿಸಲಾಯಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈವಿಜಯೇಂದ್ರ ತಿಳಿಸಿದ್ದಾರೆ. 

ಕಾರ್ಯಾಗಾರದಲ್ಲಿ ಪಕ್ಷದ ಅಪೇಕ್ಷಿತರು ಭಾಗವಹಿಸಿ ಉಪಯುಕ್ತ ಸಲಹೆ ಹಾಗೂ ಮಾರ್ಗದರ್ಶನ ಪಡೆದುಕೊಳ್ಳುತ್ತಿದ್ದು, ಬಿಜೆಪಿಯಲ್ಲಿ ತಳಮಟ್ಟದ ಕಾರ್ಯಕರ್ತರೇ ಪಕ್ಷದ ಆಧಾರ ಸ್ತಂಭವಾಗಿದ್ದು ಈ ನಿಟ್ಟಿನಲ್ಲಿ ತಳಮಟ್ಟದ ಕಾರ್ಯಕರ್ತರನ್ನು ಸಂಘಟನೆ ಹಾಗೂ ಚುನಾವಣೆಗಳಲ್ಲಿ ಸಕ್ರಿಯವಾಗಿ ತಮ್ಮನ್ನು ಸಮರ್ಪಿಸಿಕೊಳ್ಳುವಂತೆ ಪ್ರೇರಣೆ ನೀಡುವ ಮಾರ್ಗದರ್ಶನವನ್ನು ನೀಡಲಾಯಿತು ಎಂದು ವಿಜಯೇಂದ್ರ ತಿಳಿಸಿದರು. 

- Advertisement - 

ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ರೀತುರಾಜ್ ಸಿಂಹ, ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪ್ರೀತಮ್ ಗೌಡ, ಪಿ ರಾಜೀವ್ ಸೇರಿದಂತೆ ಪಕ್ಷದ ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾಧ್ಯಕ್ಷರು, ಬ್ಲಾಕ್ ಮಟ್ಟದ ಪ್ರಮುಖರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

 

- Advertisement - 

Share This Article
error: Content is protected !!
";