ಬಿಜೆಪಿಯ ಕುತಂತ್ರ ಆರೋಪಗಳು ಫಲಿಸುವುದಿಲ್ಲ-ರಾಮಲಿಂಗಾರೆಡ್ಡಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಸಣ್ಣ ವ್ಯಾಪಾರಿಗಳಿಗೆ ಡಿಜಿಟಲ್ ಪೇಮೆಂಟ್‌ನಿಂದ ತೆರಿಗೆ ನೋಟೀಸ್ ನೀಡಲಾಗುತ್ತಿದೆ ಅದಕ್ಕೆ ರಾಜ್ಯ ಸರ್ಕಾರ ಹೊಣೆ ಎಂದು ಗೂಬೆ ಕೂರಿಸುತ್ತಿರುವ ಬಿ.ಜೆ.ಪಿ ಅವರೇ ಎಂದು ಸಾರಿಗೆ ಸಚಿವ ಆರ್.ರಾಮಲಿಂಗಾರೆಡ್ಡಿ ಕಿಡಿಕಾರಿದ್ದಾರೆ. ಮಗುವನ್ನು ಅಳುವಂತೆ ಮಾಡುವುದು ನೀವೇ
, ನಂತರ ತೊಟ್ಟಿಲು ತೂಗುವುದು ನೀವೇ? ಎಷ್ಟು ಕಾಲ ಈ ಮೆಲೋ ಡ್ರಾಮವನ್ನು ಮುಂದುವರಿಸುವ ಇರಾದೆ ಇದೆ ಎಂದು ತಿಳಿಸುವಿರಾ?

- Advertisement - 

ಜಿಎಸ್‌ಟಿ ವ್ಯವಸ್ಥೆಯು ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿದ್ದು, ಜಿ ಎಸ್‌ ಟಿ ಕೌನ್ಸಿಲ್ ಕೂಡ ಕೇಂದ್ರ ಸರ್ಕಾರದಡಿಯಲ್ಲಿ ಕೆಲಸ ಮಾಡುತ್ತದೆ ಎಂಬುದು ತಮಗೆ ತಿಳಿದಿಲ್ಲವೇ? ಅಥವಾ ತಿಳಿದು ಕೂಡ ಅಸಹಾಯಕರಾಗಿ, ಕೇಂದ್ರ ಸರ್ಕಾರವನ್ನು ಪ್ರಶ್ನಿಸುವ ತಾಕತ್ತಿಲ್ಲದೆ ಜನರನ್ನು ದಾರಿ ತಪ್ಪಿಸಲು ರಾಜ್ಯ ಸರ್ಕಾರದ ಮೇಲೆ ಗೂಬೆ ಕೂರಿಸುವ ತಮ್ಮ‌ಹುನ್ನಾರವೇ? ಎಂದು ಅವರು ಖಾರವಾಗಿ ಪ್ರಶ್ನಿಸಿದ್ದಾರೆ.

- Advertisement - 

ಜಿ ಎಸ್ ಟಿ ಕೌನ್ಸಿಲ್ ತೆಗೆದುಕೊಳ್ಳುವ ತೀರ್ಮಾನಗಳಿಗೆ ರಾಜ್ಯ ಸರ್ಕಾರ ನೇರ ಹೊಣೆಯಲ್ಲ. ತಮ್ಮ ಕುತಂತ್ರ ಆರೋಪಗಳು ಫಲಿಸುವುದಿಲ್ಲ.

 ಸಣ್ಣ ಮತ್ತು ಮಧ್ಯಮ ವ್ಯಾಪಾರಿಗಳಿಗೆ ನಿಜವಾಗಿಯೂ ಸಹಾಯ ಮಾಡುವ  ಕಾಳಜಿ‌‌ ಇದ್ದಲ್ಲಿ, ಕೇಂದ್ರ ಸರ್ಕಾರಕ್ಕೆ ನಿಯೋಗ ತೆರಳಿ ಈ ಸಮಸ್ಯೆ  ಪರಿಹರಿಸಿ, ಅದು ಬಿಟ್ಟು, ವ್ಯಾಪಾರಿಗಳಿಗೆ ಉಚಿತವಾಗಿ ಅಡಿಟರ್ ಸಲಹೆ ನೀಡುತ್ತೀವೆ ಎಂದು ಜಾಹೀರಾತು ಹಾಕಿ ತಮ್ಮ ಮಾರ್ಯಾದೆಯನ್ನು ಮತ್ತಷ್ಟು ಕಳೆದುಕೊಳ್ಳಬೇಡಿ.

- Advertisement - 

ಬಿ.ಜೆ.ಪಿ ಯವರೇ ನಾಚಿಕೆ‌, ಮಾನ, ಮಾರ್ಯಾದೆ ಎಂಬ ಪದಕ್ಕೆ ಅರ್ಥವೇನಾದರೂ ಗೊತ್ತಿದ್ದರೆ ಸತ್ಯ ಮಾತನಾಡುವುದನ್ನು ಕಲಿಯಿರಿ ಎಂದು ಸಚಿವ ರಾಮಲಿಂಗಾರೆಡ್ಡಿ ತಾಕೀತು ಮಾಡಿದರು.

 

Share This Article
error: Content is protected !!
";