ಅಪಪ್ರಚಾರಕ್ಕೆ ಮನನೊಂದು ಬಿಎಂಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸುಳ್ಳು ಆರೋಪ ಹಾಗೂ ಅಪಪ್ರಚಾರದಿಂದ ಉಂಟಾದ ಅವಮಾನ ತಾಳಲಾರದೆ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ನಡೆದಿದೆ.

​ಘಟನೆಯ ವಿವರ:
​ಮಲ್ಲಾಡಿಹಳ್ಳಿ ಆಯುರ್ವೇದ ಕಾಲೇಜಿನಲ್ಲಿ ಬಿ.ಎಂ.ಎಸ್ (BAMS) ವ್ಯಾಸಂಗ ಮಾಡುತ್ತಿದ್ದ, ಪ್ರಸ್ತುತ ಇಂಟರ್ನ್‌ಶಿಪ್ ನಡೆಸುತ್ತಿದ್ದ ಲಿಖಿತ (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈಕೆ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾಳೆ.

- Advertisement - 

​ಆತ್ಮಹತ್ಯೆಗೆ ಕಾರಣ:
​ಮೃತ ವಿದ್ಯಾರ್ಥಿನಿ ಹಾಗೂ ಕಾಲೇಜಿನ ಉಪನ್ಯಾಸಕ ಡಾ. ರಾಜು ಅವರ ನಡುವೆ ಅನೈತಿಕ ಸಂಬಂಧವಿದೆ ಎಂದು ಸಹಪಾಠಿಗಳು ಕಾಲೇಜಿನಲ್ಲಿ ಅಪಪ್ರಚಾರ ಮಾಡಿದ್ದರು ಎನ್ನಲಾಗಿದೆ.
ಈ ವಿಷಯ ತಿಳಿದ ಉಪನ್ಯಾಸಕ ಡಾ. ರಾಜು ಅವರ ಪತ್ನಿ ನಿಶಾ, ಕಾಲೇಜಿಗೆ ಬಂದು ವಿದ್ಯಾರ್ಥಿನಿ ಲಿಖಿತಾ ಜೊತೆ ಗಲಾಟೆ ನಡೆಸಿ, ಎಲ್ಲರ ಮುಂದೆ ಅವಮಾನಿಸಿದ್ದರು ಎಂದು ತಿಳಿದುಬಂದಿದೆ.

​ಡೆತ್‌ನೋಟ್‌ನಲ್ಲಿ ಏನಿದೆ?
ಲಿಖಿತಾ ಸಾವಿಗೂ ಮುನ್ನ ಬರೆದಿಟ್ಟಿರುವ ಡೆತ್‌ನೋಟ್ ಪತ್ತೆಯಾಗಿದ್ದು, ಅದರಲ್ಲಿ ತನ್ನ ಸಾವಿಗೆ ಅನುಷಾ, ರಕ್ಷಾ, ಚಿನ್ಮಯಿ ಹಾಗೂ ನಿಶಾ ರಾಜ್ ಅವರೇ ನೇರ ಕಾರಣ ಎಂದು ಉಲ್ಲೇಖಿಸಿದ್ದಾಳೆ. ಸುಳ್ಳು ಆರೋಪಗಳಿಂದ ತನಗಾದ ಅವಮಾನವೇ ಈ ನಿರ್ಧಾರಕ್ಕೆ ಕಾರಣ ಎಂದು ನೊಂದ ಯುವತಿ ಪತ್ರ ಬರೆದಿದ್ದಾಳೆನ್ನಲಾಗಿದೆ.

- Advertisement - 

​ಪೊಲೀಸ್ ಭೇಟಿ ಮತ್ತು ತನಿಖೆ:
​ಘಟನಾ ಸ್ಥಳಕ್ಕೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ರಂಜಿತ್ ಕುಮಾರ್ ಬಂಡಾರು ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

​ಪ್ರಕರಣ ದಾಖಲು: ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

​ಆರೋಪಿಗಳ ವಿರುದ್ಧ ಕ್ರಮ: ಡೆತ್‌ನೋಟ್‌ನಲ್ಲಿ ಹೆಸರಿಸಲಾದ ವ್ಯಕ್ತಿಗಳ ವಿಚಾರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.

​ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ತನಿಖೆ ಮುಂದುವರಿದಿದ್ದು, ಇಡೀ ಜಿಲ್ಲೆಯಲ್ಲಿ ಈ ಘಟನೆ ತೀವ್ರ ಚರ್ಚೆಗೆ ಹಾಗೂ ವಿಷಾದಕ್ಕೆ ಕಾರಣವಾಗಿದೆ.

 

 

 

 

Share This Article
error: Content is protected !!
";