ಜಿಲ್ಲಾಧಿಕಾರಿಗಳ ಸರ್ಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ದಾವಣಗೆರೆ ಜಿಲ್ಲಾಧಿಕಾರಿಗಳ ಸರ್ಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ ಬಂದಿದ್ದು ಪೊಲೀಸರನ್ನು ಹೈರಾಣಾಗಿಸಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಜಿಲ್ಲಾಧಿಕಾರಿಗಳ ಮನೆಗೆ ಬಿಗಿ ಭದ್ರತೆ ಒದಗಿಸಿದ್ದಾರೆ.

ಪೊಲೀಸ್ ತುರ್ತು ಸಹಾಯವಾಣಿ 112ಕ್ಕೆ ಕರೆ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬ, ದಾವಣಗೆರೆ ನಗರದ ರಿಂಗ್ ರೋಡ್‌ನಲ್ಲಿರುವ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರ ಸರ್ಕಾರಿ ನಿವಾಸದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದಾರೆ.

- Advertisement - 

ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಶ್ವಾನ ದಳ ಮತ್ತು ಬಾಂಬ್ ನಿಷ್ಕ್ರಿಯ ದಳ ಜಿಲ್ಲಾಧಿಕಾರಿಗಳ ನಿವಾಸದ ಮೂಲೆ ಮೂಲೆಗಳನ್ನು ಕೂಲಂಕಷವಾಗಿ ಪರಿಶೀಲನೆ ನಡೆಸುತ್ತಿವೆ.

ಸುಮಾರು ಒಂದು ತಿಂಗಳ ಹಿಂದೆ ಇದೇ ರೀತಿ ಜಿಲ್ಲಾಧಿಕಾರಿಗಳ ಕಚೇರಿಗೂ ಬಾಂಬ್ ಬೆದರಿಕೆ ಕರೆ ಬಂದಿತ್ತು. ಇದೀಗ ನೇರವಾಗಿ ಅವರ ಮನೆಗೇ ಬೆದರಿಕೆ ಬಂದಿರುವುದು ಗಂಭೀರ ವಿಷಯವಾಗಿ ಪರಿಣಮಿಸಿದೆ.

- Advertisement - 

ದಾವಣಗೆರೆ ನಗರ ಪೊಲೀಸರು ಈಗಾಗಲೇ ತಾಂತ್ರಿಕ ತಂಡದ ನೆರವಿನೊಂದಿಗೆ 112 ಕ್ಕೆ ಕರೆ ಮಾಡಿದ ವ್ಯಕ್ತಿಯ ಲೋಕೇಶನ್ ಪತ್ತೆ ಹಚ್ಚಲು ಮುಂದಾಗಿದ್ದಾರೆ. ಜಿಲ್ಲಾಧಿಕಾರಿಗಳ ನಿವಾಸದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಇದೊಂದು ಹುಸಿ ಬಾಂಬ್ ಕರೆಯೇ ಅಥವಾ ಗಂಭೀರವೇ ಎನ್ನುವುದು ತನಿಖೆಯಿಂದ ಪತ್ತೆ ಆಗಬೇಕಿದೆ.

 

Share This Article
error: Content is protected !!
";