ಬಿಪಿಎಲ್ ಕಾರ್ಡ್ ರದ್ದು ಸಿಎಂ-ಡಿಸಿಎಂ ಸ್ಪಷ್ಟನೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಸರ್ಕಾರ ಅರ್ಹ ಬಿಪಿಎಲ್ ಕಾರ್ಡ್ ಗಳನ್ನು ಯಾವುದೇ ಕಾರಣಕ್ಕೂ ರದ್ದು ಮಾಡುವುದಿಲ್ಲ, ಅರ್ಹ ಬಿಪಿಎಲ್ ಕುಟುಂಬಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ಸಿಎಂ, ಡಿಸಿಎಂ ಅವರು ತಿಳಿಸಿದ್ದಾರೆ.

ಕೆಲವು ಅನರ್ಹರು ಸವಲತ್ತು ಪಡೆದುಕೊಂಡರೂ ಚಿಂತೆ ಇಲ್ಲ. ಅರ್ಹರು ಅನ್ನಭಾಗ್ಯ ಯೋಜನೆಯಿಂದ ವಂಚಿತರಾಗಬಾರದು. ಎಲ್ಲ ಅರ್ಹ ಬಡ ಕುಟುಂಬಗಳಿಗೆ ಬಿಪಿಎಲ್ ಸಿಗಬೇಕು ಎನ್ನುವುದು ಸರ್ಕಾರದ ಕಾಳಜಿ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬಡವರ ಆಹಾರದ ವಿಚಾರದಲ್ಲಿ ಬಿಜೆಪಿಯವರಿಂದ ಪಾಠ ಕಲಿಯುವ ಅಗತ್ಯವಿಲ್ಲ, ಶ್ರೀಮಂತರು, ಆದಾಯ ತೆರಿಗೆ ಪಾವತಿಸುವವರು, ನೌಕರರೂ ಅಕ್ರಮವಾಗಿ ಬಿಪಿಎಲ್ ಪಡೆದಿದ್ದು, ಇಂತಹ ಕಾರ್ಡ್‌ಗಳನ್ನು ಎಪಿಎಲ್‌ಗೆ ಬದಲಾಯಿಸಲಾಗಿದೆ. ಇದನ್ನೇ ಬಡವರ ಬಿಪಿಎಲ್ ಕಾರ್ಡ್ ರದ್ದುಪಡಿಸಲಾಗುತ್ತಿದೆ ಎಂದು ಬಿಂಬಿಸುವುದು ಸರಿಯೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಅರ್ಹ ಬಿಪಿಎಲ್ ಫಲಾನುಭವಿಗಳು ಆತಂಕಪಡುವ ಅಗತ್ಯವಿಲ್ಲ. ಕೇಂದ್ರ ಸರ್ಕಾರದ ಕಾನೂನಿನ ಅನ್ವಯ ಯಾರು ಬಿಪಿಎಲ್ ಕಾರ್ಡ್‌ಗೆ ಅರ್ಹರಲ್ಲವೊ ಅಂಥವರನ್ನು ಪಟ್ಟಿಯಿಂದ ಕೈಬಿಡಲಾಗುವುದು. ಯಾವುದೇ ಕಾರಣಕ್ಕೂ ಅರ್ಹರನ್ನು ಪಟ್ಟಿಯಿಂದ ಕೈಬಿಡುವುದಿಲ್ಲ,

ಒಂದು ವೇಳೆ ಬಿಟ್ಟು ಹೋಗಿದ್ದರೆ ಮತ್ತೆ ಅವರಿಂದ ಅರ್ಜಿ ಪಡೆದು ಬಿಪಿಎಲ್ ಪಟ್ಟಿಗೆ ಸೇರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಭರವಸೆ ನೀಡಿದ್ದಾರೆ.

 

 

- Advertisement -  - Advertisement -  - Advertisement - 
Share This Article
error: Content is protected !!
";