ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಏಷ್ಯಾದ ಅತಿದೊಡ್ಡ ತಂತ್ರಜ್ಞಾನ ಸಮ್ಮೇಳನಗಳಲ್ಲಿ ಒಂದಾಗಿರುವ ‘ಬೆಂಗಳೂರು ಟೆಕ್ ಶೃಂಗಸಭೆ‘ ವತಿಯಿಂದ ಸೋಮವಾರ ಬೆಂಗಳೂರಿನ ಖಾಸಗಿ ಹೋಟೆಲ್‘ನಲ್ಲಿ ಆಯೋಜಿಸಿದ್ದ ಉಪಹಾರ ಸಭೆಯಲ್ಲಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪಾಲ್ಗೊಂಡು, ಕ್ಯಾಟಲಿಸ್ಟ್ ಪುಸ್ತಕವನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅನಾವರಣಗೊಳಿಸಿದರು.
ಬೆಂಗಳೂರು ತಂತ್ರಜ್ಞಾನದ ತವರೂರು. ಭಾರತದ ಆವಿಷ್ಕಾರ ವಲಯದಲ್ಲಿ ಬೆಂಗಳೂರು ನಂಬರ್ ಒನ್ ಆಗಿರುವುದು ನಮ್ಮ ಹೆಮ್ಮೆ. ತಾಂತ್ರಿಕ ಉತ್ಕೃಷ್ಟತೆ, ನಾವೀನ್ಯತೆ ಮತ್ತು ಬೆಳವಣಿಗೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, ಸ್ಟಾರ್ಟ್ ಅಪ್ ಗಳ ಬೆಳವಣಿಗೆ ಮೂಲಕ ಕರ್ನಾಟಕದ ಹಿರಿಮೆ ಹೆಚ್ಚಿಸಲು ನಾವು ಬದ್ಧ.

