ಐಮಂಗಲದಲ್ಲಿ ಸ್ತನ್ಯಪಾನ ಅರಿವು ಕಾರ್ಯಕ್ರಮ

News Desk

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಐಮಂಗಲ ವ್ಯಾಪ್ತಿಯ ಅಂಗನವಾಡಿಗಳಲ್ಲಿ
ವಿಶ್ವ ಸ್ತನ್ಯಪಾನ ದಿನಾಚರಣೆ ಅಂಗವಾಗಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಪಿಎಚ್‌ಸಿ ಐಮಂಗಲ ವ್ಯಾಪ್ತಿಯ ಅಂಗನವಾಡಿಗಳಲ್ಲಿ ಮಂಗಳವಾರ ವಿಶ್ವ ಸ್ತನ್ಯಪಾನ ದಿನಾಚರಣೆಯನ್ನು ಯಶಸ್ವಿಯಾಗಿ ಆಚರಿಸಲಾಯಿತು.

- Advertisement - 

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳವರ ಕಚೇರಿಯಿಂದ ಆಗಮಸಿದ್ಧ ಜಿಲ್ಲಾ ಪೌಷ್ಟಿಕ ಮೇಲ್ವಿಚಾರಕಿ ಸಣ್ಣರಂಗಮ್ಮ ಮಾತನಾಡಿ ಸ್ತನ್ಯಪಾನದ ಮಹತ್ವ, ಸ್ತನ್ಯಪಾನದ ಉದ್ದೇಶ, ಸ್ತನ್ಯಪಾನದ ಪ್ರಯೋಜನಗಳು, ಸ್ತನ್ಯಪಾನದಿಂದ ತಾಯಂದಿರಿಗೆ ಹಾಗೂ ಶಿಶುವಿಗೆ ಸಿಗುವ ಪ್ರಯೋಜನಗಳು, ಆರೋಗ್ಯದ ಅನುಕೂಲತೆಗಲು, ತಾಯಿ ಮತ್ತು ಮಗುವಿನ ಸರ್ವತೋಮುಖ ಆರೋಗ್ಯ ವೃದ್ಧಿಯಲ್ಲಿ ಪೋಷಣೆಯಲ್ಲಿ ಪೌಷ್ಠಿಕಾಂಶಯುಕ್ತ ಆಹಾರಗಳ ಮಹತ್ವ, ಸ್ತನ್ಯಪಾನದ ಮಹತ್ವ ಕುರಿತು ಉಪನ್ಯಾಸ ನೀಡಿದರು.

ಸ್ತನ್ಯಪಾನವು ಮಗುವಿನ ಮತ್ತು ತಾಯಿಯ ಆರೋಗ್ಯಕ್ಕೆ ಬಹಳ ಮುಖ್ಯ. ಎದೆ ಹಾಲು ಮಗುವಿಗೆ ಅತ್ಯುತ್ತಮ ಪೋಷಣೆ ನೀಡುತ್ತದೆ, ರೋಗಗಳಿಂದ ರಕ್ಷಿಸುತ್ತದೆ ಮತ್ತು ತಾಯಿಯೊಂದಿಗಿನ ಬಾಂಧವ್ಯವನ್ನು ಬಲಪಡಿಸುತ್ತದೆ ಎಂದು ಸಣ್ಣರಂಗಮ್ಮ ತಿಳಿಸಿದರು.

- Advertisement - 

ಸ್ತನ್ಯಪಾನವು ಮಗುವಿನ ದವಡೆ ಮತ್ತು ಹಲ್ಲುಗಳ ಸರಿಯಾದ ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಮತ್ತು ಭವಿಷ್ಯದಲ್ಲಿ ಅಪೌಷ್ಟಿಕತೆ, ಸ್ಥೂಲಕಾಯತೆ ಮತ್ತು ಹೃದ್ರೋಗದ ಅಪಾಯ ಕಡಿಮೆ ಮಾಡುತ್ತದೆ. ಸ್ತನ್ಯಪಾನವು ತಾಯಿ ಮತ್ತು ಮಗುವಿನ ನಡುವೆ ಬಲವಾದ ಬಾಂಧವ್ಯವನ್ನು ಬೆಳೆಸಲು ಸಹಾಯ ಮಾಡುತ್ತದೆ ಎಂದು ಸಣ್ಣರಂಗಮ್ಮ ಹೇಳಿದರು.

ಆರೋಗ್ಯ ಇಲಾಖೆ ಅಧಿಕಾರಿ ರಮೇಶ್ ಮಾತನಾಡಿ, ಎದೆ ಹಾಲು ಮಗುವಿನ ಬೆಳವಣಿಗೆಗೆ ಅಗತ್ಯವಿರುವ ಪೋಷಕಾಂಶಗಳಾದ ಪ್ರೋಟೀನ್, ಕಾರ್ಬೋಹೈಡ್ರೇಟ್ಗಳು, ಕೊಬ್ಬುಗಳು, ಜೀವಸತ್ವಗಳು ಮತ್ತು ಖನಿಜಗಳನ್ನು ಒಳಗೊಂಡಿದೆ. ಎದೆ ಹಾಲಿನಲ್ಲಿರುವ ಪ್ರತಿಕಾಯಗಳು ಮಗುವನ್ನು ಸೋಂಕುಗಳು ಮತ್ತು ರೋಗಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಪಿಎಚ್‌ಸಿ ಐಮಂಗಲ ವೈದ್ಯಾಧಿಕಾರಿ ಮತ್ತು ಎಲ್ಲಾ ಸಿಬ್ಬಂದಿ ವರ್ಗದವರು, ಆಶಾ ಕಾರ್ಯಕರ್ತೆಯರು, ಸಾರ್ವಜನಿಕರು, ಬಾಣಂತಿಯರು, ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.

 

Share This Article
error: Content is protected !!
";