ಧಾರಾಕಾರ ಮಳೆಗೆ ಕುಸಿದ ಸೇತುವೆ

News Desk

ಚಂದ್ರವಳ್ಳಿ ನ್ಯೂಸ್, ಭದ್ರಾವತಿ:
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಧಾರಾಕಾರ ಮಳೆಯಿಂದಾಗಿ ಸೇತುವೆಯೊಂದು ಕುಸಿದು ಹೋಗಿದೆ.
ಭದ್ರಾವತಿ ತಾಲೂಕಿನ ಹಂಚಿನ ಸಿದ್ದಾಪುರ ಗ್ರಾಮದ ಬಳಿ ಘಟನೆ ನಡೆದಿದೆ. ಭದ್ರಾ ನಾಲೆಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆ ಭಾರೀ ಮಳೆಗೆ ಬಿದ್ದುಹೋಗಿದ್ದು ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗಿದೆ.
 

ಭದ್ರಾವತಿ ತಾಲೂಕಿನಲ್ಲಿ ಕಳೆದ ಎರಡು ದಿನದ ಹಿಂದೆ ಸುರಿದಿದ್ದ ಧಾರಾಕಾರ ಮಳೆಯಿಂದಾಗಿ ಅನಾಹುತ ಸಂಭವಿಸಿದ್ದು ತಡವಾಗಿ ಬೆಳಕಿಗೆ ಬರುತ್ತಿದೆ. ಒಂದೂವರೆ ಗಂಟೆಯಲ್ಲಿ 80 ಮಿಮಿ ಮಳೆ ಸುರಿದ ಪರಿಣಾಮ ಮನೆಗಳಿಗೆ ನೀರು ನುಗ್ಗಿ ಅನಾಹುತ ಸಂಭವಿಸಿದ ಚಿತ್ರ ಲಭ್ಯವಾಗಿತ್ತು. ಈಗ ಮತ್ತೊಂದು ಘಟನೆ ತಡವಾಗಿ ಬೆಳಕಿಗೆ ಬಂದಿದೆ. 

ಹಂಚಿನ ಸಿದ್ದಾಪುರ ಗ್ರಾಮದಿಂದ ಸಿದ್ದೇಶ್ವರ ದೇವಸ್ಥಾನ ಹಾಗು ಜಮೀನುಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆಕುಸಿದು ಹೋಗಿದೆ. ಸಾರ್ವಜನಿಕರು ಪರದಾಡುವಂತಾಗಿದೆ. ಸೇತುವೆ ಶೀಘ್ರ ನಿರ್ಮಿಸಿಕೊಡುವಂತೆ ಗ್ರಾಮಸ್ಥರ ಆಗ್ರಹಿಸಿದ್ದಾರೆ. 

- Advertisement -  - Advertisement -  - Advertisement - 
Share This Article
error: Content is protected !!
";