ಸ್ಕೇಟಿಂಗ್ ಸ್ಪರ್ಧೆಯಲ್ಲಿ ಜೀವನ್ ಗೆ ಕಂಚಿನ ಪದಕ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಕರ್ನಾಟಕ ರಾಜ್ಯ ಸ್ಪೀಡ್ ಸ್ಕೇಟಿಂಗ್ ಅಸೋಸಿಯೇಷನ್ ವತಿಯಿಂದ ಡಿ.೬
, ೭ ರಂದು ಶಿವಮೊಗ್ಗದಲ್ಲಿ ನಡೆದ ರಾಜ್ಯ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ

ನಗರದ ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಯ ೫ ನೇ ತರಗತಿ ವಿದ್ಯಾರ್ಥಿ ಜೀವನ್ ಆರ್.ಎಸ್. ಕಂಚಿನ ಪದಕ ಪಡೆದು ಜನವರಿಯಲ್ಲಿ ಚೆನ್ನೈನಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಕೇಟಿಂಗ್ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ.

- Advertisement - 

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಿ.ರಘುಚಂದನ್, ಪ್ರಾಚಾರ್ಯರಾದ ಸಂತೋಷ್‌ಕುಮಾರ್, ಸ್ಪೋರ್ಟ್ಸ್ ಕೋ-ಆರ್ಡಿನೇಟರ್ ಗೋವಿಂದರಾಜ್, ರಾಘವೇಂದ್ರ, ಸ್ಕೇಟಿಂಗ್ ಕೋಚ್ ರವಿಕುಮಾರ್, ಸುಪ್ರಿಯಾ ಹಾಗೂ ಶಾಲೆಯ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

 

- Advertisement - 

Share This Article
error: Content is protected !!
";