ಪ್ರಾದೇಶಿಕ ಪಕ್ಷ ಕಟ್ಟುವುದು ಯಾರೋ ಗೆದ್ದ ಕಪ್ ಹಿಡಿದು ಮುತ್ತಿಟ್ಟು, ರೀಲ್ಸ್ ಮಾಡುವಷ್ಟು ಸುಲಭವಲ್ಲ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶಿವಕುಮಾರಣ್ಣ
, ಪ್ರಾದೇಶಿಕ ಪಕ್ಷ ಕಟ್ಟುವುದು, ಯಾರೋ ಗೆದ್ದ ಕಪ್ ಹಿಡಿದು ಮುತ್ತಿಟ್ಟು, ರೀಲ್ಸ್ ಮಾಡುವಷ್ಟು ಸುಲಭವಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಾಲೆಳೆದಿದ್ದಾರೆ.

ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದು ಎರಡು ವರ್ಷ ಕಳೆದರು ನಿಗಮ ಮಂಡಳಿಗಳಲ್ಲಿ ನಿಮ್ಮ ಕಾರ್ಯಕರ್ತರಿಗೆ ಅಧಿಕಾರ ಕೊಡಲು ಯೋಗ್ಯತೆ ಇಲ್ಲದವರು ನಮ್ಮ ಕಾರ್ಯಕರ್ತರನ್ನು ಪಕ್ಷಕ್ಕೆ ಕರೆಯುತ್ತಿದ್ದಾರೆ ಎಂದು ನಿಖಿಲ್ ವಾಗ್ದಾಳಿ ಮಾಡಿದರು.

- Advertisement - 

ಗ್ಯಾರಂಟಿಅನುಷ್ಠಾ ಸಮಿತಿ ಹೆಸರಿನಲ್ಲಿ ರಾಜ್ಯದ ಜನರ ತೆರಿಗೆ ಹಣದಲ್ಲಿ ಗೌರವಧನ ಪಡೆದು ಕೆಲಸ ಮಾಡುತ್ತಿರುವ ಗಂಜಿ ಗಿರಾಕಿ ಕರ್ನಾಟಕ ಕಾಂಗ್ರೆಸ್ ಕಾರ್ಯಕರ್ತರ ರೀತಿಯಲ್ಲ ನಮ್ಮ ಜೆಡಿಎಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರು.

ತಾಯಿ ಚಾಮುಂಡೇಶ್ವರಿಯ ಆಶೀರ್ವಾದ, ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ವರ್ಚಸ್ಸಿನ ಮುಂದೆ ನಿಮ್ಮ ಮಾತುಗಳಿಗೆ ಕವಡೆಕಾಸಿನ ಕಿಮ್ಮತ್ತು ಕೊಡುವವರು ಯಾರು ಇಲ್ಲ ಎಂದು ನಿಖಿಲ್ ಟೀಕಾಪ್ರಹಾರ ಮಾಡಿದ್ದಾರೆ.

- Advertisement - 

ಇದೇ ಉತ್ಸಾಹ ಬೆಂಗಳೂರಿನ ರಸ್ತೆಗಳ ಗುಂಡಿ ಮುಚ್ಚುವ ಬಗ್ಗೆ ಇದ್ದಿದರೆ ಸ್ವಲ್ಪ ಮರ್ಯಾದೆಯಾದರು ಉಳಿಯುತಿತ್ತು. ಉಡಾಫೆ ಬಿಟ್ಟು ರಾಜ್ಯದ ಅಭಿವೃದ್ಧಿಯ ಬಗ್ಗೆ ಗಮನ ಹರಸಿ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ನಿಖಿಲ್ ಕಿವಿ ಮಾತು ಹೇಳಿದ್ದಾರೆ.

 

Share This Article
error: Content is protected !!
";