ಅಪರ ಜಿಲ್ಲಾಧಿಕಾರಿಗಳಿಂದ ಬನ್ನಿಪೂಜೆ

News Desk

ಚಂದ್ರವಳ್ಳಿ ನ್ಯೂಸ್, ತುಮಕೂರು:
ಜಿಲ್ಲೆಯ ಕುಣಿಗಲ್ ತಾಲೂಕು ಯಡಿಯೂರು ಸಿದ್ದಲಿಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಜಯದಶಮಿ ದಿನದಂದು ಅಪರ ಜಿಲ್ಲಾಧಿಕಾರಿ ಹಾಗೂ ದೇವಸ್ಥಾನದ ಆಡಳಿತಧಿಕಾರಿ ಡಾ:  ಎನ್. ತಿಪ್ಪೇಸ್ವಾಮಿ ಅವರು ಕದಳೀ ಛೇದನದ ಮೂಲಕ ಬನ್ನಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು, ಕಾರ್ಯನಿರ್ವಹಣಾಧಿಕಾರಿ ಮಹೇಶ್ ಕುಮಾರ್ ಸೇರಿದಂತೆ ಸಾವಿರಾರು ಮಂದಿ ಭಕ್ತಾಧಿಗಳು ಉಪಸ್ಥಿತರಿದ್ದು, ಪೂಜಾ ಸೇವೆಯನ್ನು ಕಣ್ತುಂಬಿಕೊಂಡು ಸಂಭ್ರಮಿಸಿದರು.

- Advertisement -  - Advertisement - 
Share This Article
error: Content is protected !!
";