ಲೇಖಕಿ ಬಾನು ಮುಸ್ತಾಕ್ ಅವರಿಗೆ ಬೂಕರ್ ಸಾಹಿತ್ಯ ಪ್ರಶಸ್ತಿ, ಕನ್ನಡ, ಕನ್ನಡಿಗ ಮತ್ತು ಕರ್ನಾಟಕ ಸಂಭ್ರಮಿಸುವ ಹೊತ್ತು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಂತಾರಾಷ್ಟ್ರೀಯ ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾಗಿರುವ ಕನ್ನಡದ ಹೆಮ್ಮೆಯ ಲೇಖಕಿ ಬಾನು ಮುಸ್ತಾಕ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಇದು ಕನ್ನಡ
, ಕನ್ನಡಿಗ ಮತ್ತು ಕರ್ನಾಟಕ ಸಂಭ್ರಮಿಸುವ ಹೊತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

- Advertisement - 

ಈ ನೆಲದ ಸೌಹಾರ್ದತೆ, ಜಾತ್ಯತೀತತೆ ಮತ್ತು ಸೋದರತ್ವದ ನಿಜ ಮೌಲ್ಯಗಳನ್ನು ಮೈಗೂಡಿಸಿಕೊಂಡು ಬರೆಯುತ್ತಿರುವ ಬಾನು ಮುಸ್ತಾಕ್ ಅವರು ಕನ್ನಡದ ಹಿರಿಮೆಯ ಬಾವುಟವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾರಿಸಿ ನಮಗೆಲ್ಲ ಗೌರವ ತಂದುಕೊಟ್ಟಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

- Advertisement - 

ಅವರು ಇನ್ನಷ್ಟು ಕಾಲ ಸತ್ವಯುತವಾಗಿ ಬರೆಯುತ್ತಾ ಕನ್ನಡದ ಕಂಪನ್ನು ಜಗದಗಲಕ್ಕೆ ಪಸರಿಸುತ್ತಾ ಇರಲಿ ಎಂದು ಮುಖ್ಯಮಂತ್ರಿಗಳು ಹಾರೈಸಿದ್ದಾರೆ.

ಬೂಕರ್ ಪ್ರಶಸ್ತಿಗೆ ಭಾಜನವಾಗಿರುವ ಅವರ ಕೃತಿ ಎದೆಯ ಹಣತೆಯನ್ನು ಇಂಗ್ಲೀಷ್ ಗೆ ಅನುವಾದಿಸಿರುವ ಪ್ರತಿಭಾವಂತ ಲೇಖಕಿ ದೀಪಾ ಭಸ್ತಿ ಅವರಿಗೂ ಕನ್ನಡಿಗರೆಲ್ಲರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು. ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

- Advertisement - 

 

Share This Article
error: Content is protected !!
";