ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಸ್ತೆ ಬದಿ ನಿಲುಗಡೆ ಮಾಡಿದ್ದ ಬಸ್ಸಿಗೆ ಬೆಂಕಿ ಹೊತ್ತಿಕೊಂಡು ಬಸ್ ಒಳಗಿದ್ದ ವ್ಯಕ್ತಿಯೊಬ್ಬನ ಮೃತದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
ಮಂಗಳವಾರ ರಾತ್ರಿ 10:45ರ ಸುಮಾರಿಗೆ ಬಾಣಸವಾಡಿಯ ಒಎಂಬಿಆರ್ ಲೇಔಟ್‌ನಲ್ಲಿ ಘಟನೆ ನಡೆದಿದ್ದು, ಬಸ್‌ನೊಳಗೆ ಸುಟ್ಟ ಸ್ಥಿತಿಯಲ್ಲಿ ಪುರುಷನ ಮೃತದೇಹ ಪತ್ತೆಯಾಗಿದೆ.
ಸ್ಥಳಕ್ಕೆ ರಾಮಮೂರ್ತಿನಗರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಬಸ್ ಮಾರಾಟ ಮಾಡಲು ತಂದಿದ್ದ ಮಾಲೀಕ ಮನೆಯ ಪಕ್ಕದ ರಸ್ತೆಯಲ್ಲಿ ನಿಲ್ಲಿಸಿದ್ದರು. ರಾತ್ರಿ ವೇಳೆ ಕೆಲ ದಿನಗಳಿಂದ ಯುವಕರು ಬಸ್ ಒಳಗೆ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದರು.
ಡೋರ್ ಲಾಕ್ ಮಾಡಿದರೂ ಸಹ ಬಸ್‌ನೊಳಗೆ ಹೋಗಿ ಕುಳಿತುಕೊಳ್ಳತ್ತಿದ್ದ ಯುವಕರು ಗಲಾಟೆ ಮಾಡಿಕೊಂಡು ತಮ್ಮಲ್ಲೇ ಯಾರನ್ನಾದರೂ ಹತ್ಯೆಗೈದಿರಬಹುದು ಎಂದು ಪೊಲೀಸರು ಶಂಕಿಸಲಾಗಿದೆ. ಮೃತನ ಗುರುತು ಪತ್ತೆ ಆಗಿಲ್ಲ ಎಂದು ರಾಮಮೂರ್ತಿನಗರ ಪೊಲೀಸರು ಮಾಹಿತಿ ನೀಡಿದ್ದಾರೆ.

