ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ನಿಮಿತ್ತ ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸಲು ಬಸ್ ಪಾಸ್ ವಿತರಿಸುವ ಯೋಜನೆಯನ್ನು ಸಾರಿಗೆ ಇಲಾಖೆಯ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲಾಗಿದೆ. ಸರ್ಕಾರವು ತನ್ನ ಪರಿಮಿತ ಆರ್ಥಿಕ ಸಂಪನ್ಮೂಲಗಳ ಆಧಾರದ ಮೇಲೆಯೆ ಇಷ್ಟೆಲ್ಲ ಸಾಧನೆಗಳನ್ನು ಮಾಡಿದೆ. ಏಳನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿಗೆ ತಂದಿದೆ.
ರಾಜ್ಯದ ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಕೃತಿಕವೂ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನ ಮಾಡುತ್ತಿದೆ. ಸಂವಿಧಾನದ ಆಶಯಗಳಿಗೆ ಪೂರಕವಾಗಿ ಜನಕಲ್ಯಾಣವನ್ನೆ ಪ್ರಧಾನ ಧ್ಯೇಯವಾಗಿಟ್ಟುಕೊಂಡು ಕೆಲಸ ಮಾಡುತ್ತಿದೆ. ಸರ್ವರ ಶಾಂತಿ, ಸರ್ವರ ಅಭ್ಯುದಯವೇ ಸಂವಿಧಾನದ ಆಶಯ. ಈ ಆಶಯವನ್ನು ಚಾಚೂ ತಪ್ಪದೆ ಪಾಲಿಸುತ್ತಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು.