ಪ್ರಧಾನಿಯಾಗಿ 11 ವರ್ಷ ಪೂರೈಸಿದ ಪ್ರಧಾನಿ ಮೋದಿ ಅವರಿಗೆ ಅಭಿನಂದಿಸಿದ ಬಿವೈವಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಗತ್ತೇ ಮೆಚ್ಚಿದ ವಿಶ್ವನಾಯಕನಾಗಿ, ದಣಿವರಿಯದೆ ದೇಶದ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ, ದಕ್ಷ ಆಡಳಿತ, ಸಮರ್ಥ ನಾಯಕತ್ವ, ಸ್ಪಂದನಶೀಲ ಪ್ರಧಾನಿಯಾಗಿ 11 ವರ್ಷ ಪೂರೈಸಿದ ನಮ್ಮೆಲ್ಲರ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

- Advertisement - 

ವಿಕಸಿತ ಭಾರತ ನಿರ್ಮಾಣಕ್ಕಾಗಿ  ಮಹಾಸಂಕಲ್ಪ ತೊಟ್ಟು ತಪಸ್ವಿ ಸಾಧಕರಂತೆ ದೇಶ ಕಟ್ಟುವ ಕಾಯಕದಲ್ಲಿ ತಮ್ಮನ್ನು ಸಮರ್ಪಿಸಿಕೊಂಡಿರುವ  ಹೆಮ್ಮೆಯ ಪ್ರಧಾನಿ ಮೋದಿ ಜೀ ಯವರ ಕಾರ್ಯ ಶೈಲಿ ನಮ್ಮಂಥ ಕಾರ್ಯಕರ್ತರಿಗೆ ನಿತ್ಯ ಚೈತನ್ಯದ ಚಿಲುಮೆಯಾಗಿದೆ.

- Advertisement - 

2014ರ ಮೇ 26ರಂದು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾನ್ಯ ನರೇಂದ್ರ ಮೋದಿಜೀ ಅವರು ಇಡೀ ವಿಶ್ವವೇ ಭಾರತದ ಕಡೆಗೆ ತಿರುಗಿ ನೋಡುವಂತೆ ಸಾಮಾಜಿಕ, ಆರ್ಥಿಕ, ಮೂಲಸೌಕರ್ಯ, ರಕ್ಷಣೆ, ಔದ್ಯೋಗಿಕ, ಶೈಕ್ಷಣಿಕ, ವಿದೇಶಾಂಗ ಕ್ಷೇತ್ರಗಳಲ್ಲಿ ಅನೇಕ ರೀತಿಯ ಬದಲಾವಣೆಗಳನ್ನು, ಯೋಜನೆಗಳನ್ನು ತರುವ ಮೂಲಕ ಭಾರತ ಅಭಿವೃದ್ಧಿ ಪಥದತ್ತ ಸಾಗಿದೆ. ತಮ್ಮ ದಕ್ಷ ಹಾಗೂ ಸಮರ್ಥ ನಾಯಕತ್ವದಲ್ಲಿ ಜಗತ್ತಿನ 4 ನೇ ಅತೀದೊಡ್ಡ ಆರ್ಥಿಕ ರಾಷ್ಟ್ರವಾಗಿ ಹೊರಹೊಮ್ಮಿದ್ದು ವಿಕಸಿತ ಭಾರತದ ಸಂಕಲ್ಪಿತ ಗುರಿ ಶೀಘ್ರ ತಲುಪುವ ಅಚಲ ವಿಶ್ವಾಸದೊಂದಿಗೆ ಮತ್ತೊಮ್ಮೆ ಅಭಿನಂದಿಸುವೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.

- Advertisement - 
Share This Article
error: Content is protected !!
";