ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ರಾಜ್ಯದಲ್ಲಿ ಬಾಣಂತಿಯರು ಮತ್ತು ಹಸುಗೂಸುಗಳ ಸರಣಿ ಸಾವಿನ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿಯೂ ಕಳೆದ 6 ತಿಂಗಳಲ್ಲೇ 29 ಬಾಣಂತಿಯರು ಹಾಗೂ 1 ವರ್ಷದಲ್ಲಿ 322 ನವಜಾತ ಶಿಶುಗಳು ಮೃತಪಟ್ಟಿದ್ದು,
ಇಂದು ಬೆಳಗಾವಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ವಸ್ತುಸ್ಥಿತಿಯ ಬಗ್ಗೆ ಮಾಹಿತಿ ಪಡೆದು ಸದ್ಯ ಚಿಕಿತ್ಸೆ ಪಡೆಯುತ್ತಿರುವ ಬಾಣಂತಿಯರ ಕ್ಷೇಮ ವಿಚಾರಿಸಲಾಯಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್‌ವಿರೋಧ ಪಕ್ಷ ನಾಯಕರಾದ ಚಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ, ರಾಜ್ಯ ಉಪಾಧ್ಯಕ್ಷರಾದ ಅನಿಲ್ ಬೆನಕೆ, ಮಾಜಿ ಸಚಿವೆ ಶಶಿಕಲಾ ಜೊಲ್ಲೆ,
ಶಾಸಕರಾದ ಅಭಯ್ ಪಾಟೀಲ್, ವಿಧಾನ ಪರಿಷತ್‌ಸದಸ್ಯರಾದ ಹೇಮಲತಾ ನಾಯಕ್, ಮಾಜಿ ಶಾಸಕರಾದ ಸಂಜಯ್ ಪಾಟೀಲ್, ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ್, ಸೇರಿದಂತೆ ಪಕ್ಷದ ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.