ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭಾರತ ಚುನಾವಣಾ ಆಯೋಗವು 2024ನೇ ಸಾಲಿನಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಶಿಕ್ಷಣ ಮತ್ತು ಅರಿವು ಮೂಡಿಸುವಲ್ಲಿ ಅತ್ಯುತ್ತಮ ಪ್ರಚಾರ/ಕಾರ್ಯಕ್ರಮ ಹಮ್ಮಿಕೊಂಡ ಮಾಧ್ಯಮ ಸಂಸ್ಥೆಗಳಿಗೆ ಮುದ್ರಣ ಮಾಧ್ಯಮ, ವಿದ್ಯುನ್ಮಾನ ಮಾಧ್ಯಮ (ಟಿವಿ),
ವಿದ್ಯುನ್ಮಾನ ಮಾಧ್ಯಮ (ರೇಡಿಯೋ) ಮತ್ತು ಆನ್ಲೈನ್ ಮಾಧ್ಯಮ (ಇಂಟರ್ನೆಟ್, ಸಾಮಾಜಿಕ ಜಾಲತಾಣ)ಗಳ 4 ವಿಭಾಗಗಳಲ್ಲಿ ಪ್ರತ್ಯೇಕವಾಗಿ ಗುರುತಿಸಿ ರಾಷ್ಟ್ರ ಮಟ್ಟದ ಮಾಧ್ಯಮ ಪ್ರಶಸ್ತಿಯನ್ನು ನೀಡಿ ಗೌರವಿಸಲಿದೆ.
ಚುನಾವಣಾ ಸಮಯದಲ್ಲಿ ಜನಜಾಗೃತಿ ಮಾಡಿರುವ ರಾಜ್ಯದ ಯಾವುದೇ ಮಾಧ್ಯಮ ಸಂಸ್ಥೆಗಳು ನೇರವಾಗಿ ಭಾರತ ಚುನಾವಣಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಬಹುದು. ಭಾರತ ಚುನಾವಣಾ ಆಯೋಗವು ನೀಡಿರುವ ಮಾರ್ಗಸೂಚಿಗಳನ್ವಯ ಸದರಿ ಪ್ರಶಸ್ತಿಗಳಿಗೆ ನೇರವಾಗಿ
ಡಿಸೆಂಬರ್ 10 ರೊಳಗಾಗಿ ನಾಮನಿರ್ದೇಶನಗಳನ್ನು [email protected] ಗೆ ಕಳುಹಿಸಿಕೊಡಬಹುದು ಅಥವಾ ಅಗತ್ಯವಿದ್ದಲ್ಲಿ ದೂರವಾಣಿ ಸಂಖ್ಯೆ: 011-23052131 ಗೆ ಸಂಪರ್ಕಿಸಬಹುದು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಚುನಾವಣೆಗಳು)ಯ ಸಹಾಯಕ ಮುಖ್ಯ ಚುನಾವಣಾಧಿಕಾರಿ ಹಾಗೂ ಪದನಿಮಿತ್ತ ಅಧೀನ ಕಾರ್ಯದರ್ಶಿ ಮಧು ಎ.ಸಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.