ಪುಸ್ತಕ ಬಹುಮಾನಕ್ಕೆ ಲೇಖಕರು ಮತ್ತು ಪ್ರಕಾಶಕರಿಂದ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಬಯಲಾಟ ಅಕಾಡೆಮಿಯು ಬಯಲಾಟ ಕಲಾಪ್ರಕಾರಗಳಾದ (ಸಣ್ಣಾಟ, ದೊಡ್ಡಾಟ, ಶ್ರೀ ಕೃಷ್ಣ ಪಾರಿಜಾತ, ತೋಗಲುಗೊಂಬೆ) ಕಲಾಪ್ರಕಾರಗಳಿಗೆ ಸಂಬಂಧಿಸಿದಂತೆ 2022 ಹಾಗೂ 2023ನೇ ಸಾಲಿನ ಕ್ಯಾಲೆಂಡರ್ ವರ್ಷದಲ್ಲಿ 2022ನೇ ಜನವರಿ 1 ರಿಂದ 2022 ನೇ ಡಿಸೆಂಬರ್ 31 ಹಾಗೂ 2022ನೇ ಜನವರಿ 1 ರಿಂದ 2023 ನೇ ಡಿಸೆಂಬರ್ 31 ರವರೆಗೆ ಪ್ರಕಟಿಸಿರುವ ಪುಸ್ತಕಗಳನ್ನು ಪುಸ್ತಕ ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರು ಮತ್ತು ಪ್ರಕಾಶರಿಂದ ಅರ್ಜಿ ಆಹ್ವಾನಿಸಿದೆ.

- Advertisement - 

ಆಯ್ಕೆಯಾದ ಪುಸ್ತಕಕ್ಕೆ 25,000 ರೂ.ಗಳ ಬಹುಮಾನವನ್ನು ನೀಡಲಾಗುವುದು. ಬಯಲಾಟದ ವಿವಿಧ ಬಗ್ಗೆ ಸಂಗೀತ, ಅಭಿನಯ, ಸಂಶೋಧನಾ, ವಿಮರ್ಶೆ, ಜೀವನಚರಿತ್ರೆ, ಪ್ರಸಂಗ ಪುಸ್ತಕ ಇತ್ಯಾದಿ ಪ್ರಕಾರಗಳನ್ನು ಒಳಗೊಂಡ ಪುಸ್ತಕಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ.

- Advertisement - 

ಪುಸ್ತಕ ಬಹುಮಾನಕ್ಕೆ ಸಲ್ಲಿಸುವ ಪುಸ್ತಕವನ್ನು ಪಠ್ಯಕ್ಕಾಗಿ ಸಿದ್ಧಪಡಿಸಿರಬಾರದು ಹಾಗೂ ಸಂಪಾದಿತ ಕೃತಿ ಅಥವಾ ಅಭಿನಂದನಾ ಕೃತಿಯಾಗಿರಬಾರದು, ಸ್ವರಚಿತವಾಗಿರಬೇಕು. ಪ್ರಥಮ ಮುದ್ರಣ ಆವೃತ್ತಿಯಾಗಿರಬೇಕು.

ಬಹುಮಾನಕ್ಕೆ ಪುಸ್ತಕಗಳನ್ನು ಕಳುಹಿಸುವವರು ರಿಜಿಸ್ಟ್ರಾರ್, ಕರ್ನಾಟಕ ಬಯಲಾಟ ಅಕಾಡೆಮಿ, ಕಲಾಭವನ ಸಾಂಸ್ಕøತಿಕ ಸಂಕೀರ್ಣಸೆಕ್ಟರ್ ನಂ.19, 6 ನೇ ರಸ್ತೆ, ನವನಗರ-ಬಾಗಲಕೋಟೆ –587103 ಇವರಿಗೆ 2024ರ ಜುಲೈ 25ರ ಒಳಗಾಗಿ ಅರ್ಜಿಯೊಂದಿಗೆ ಪುಸ್ತಕದ ನಾಲ್ಯು ಪತ್ರಿಗಳನ್ನು ಕಡ್ಡಾಯವಾಗಿ ಕಳುಹಿಸುವುದು. ಯಾವುದೇ ಕಾರಣಕ್ಕೂ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ.

- Advertisement - 

 ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ಅಕಾಡೆಮಿಯ ದೂರವಾಣಿ ಸಂಖ್ಯೆ:08354235070 ಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಹಾಗೂ ಅರ್ಜಿಗಳನ್ನು ಆಯಾ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದಾಗಿದೆ ಎಂದು ಬಾಗಲಕೋಟೆ ಕರ್ನಾಟಕ ಬಯಲಾಟ ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
error: Content is protected !!
";