ಲಾರಿಗೆ ಕಾರು ಡಿಕ್ಕಿ ಇಬ್ಬರು ಸ್ಥಳದಲ್ಲೇ ಸಾವು, ಡಿವೈಎಸ್ಪಿಗೆ ಗಾಯ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿತ್ರದುರ್ಗದ ಹೊರ ವಲಯದಲ್ಲಿ ಜರುಗಿದೆ.

ಡಿವೈಎಸ್‌ಪಿ ವೈಷ್ಣವಿ ಇವರ ತಾಯಿ ಕಮಲಾ ಹರಿಬಾಬು(65), ಚಾಲಕ ರಾಕೇಶ್ (40) ಮೃತರಾಗಿದ್ದಾರೆ. ಡಿವೈಎಸ್ಪಿ ವೈಷ್ಣವಿ ಸೇರಿದಂತೆ ಇತರೆ ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

- Advertisement - 

ಡಿವೈಎಸ್​ಪಿಗೆ ಗಾಯ:
ಕೊಲ್ಲಾಪುರದ ಡಿವೈಎಸ್‌ಪಿ ವೈಷ್ಣವಿ ಅವರಿದ್ದ ಇನ್ನೋವಾ ಕಾರು ಲಾರಿಗೆ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ
, ಮೂವರು ಗಾಯಗೊಂಡ ಘಟನೆ ಚಿತ್ರದುರ್ಗದ ತಮಟಕಲ್ಲು ಗ್ರಾಮದ ಬ್ರಿಡ್ಜ್ ಬಳಿ ನಡೆದಿದೆ.‌

ವೈಷ್ಣವಿ ಅವರನ್ನು ಚಿತ್ರದುರ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿವೈಎಸ್ಪಿ ಕುಟುಂಬಸಮೇತ ತಮಿಳುನಾಡು ಪ್ರವಾಸ ಮುಗಿಸಿ ಕೊಲ್ಲಾಪುರಕ್ಕೆ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

- Advertisement - 

ಘಟನಾ ಸ್ಥಳಕ್ಕೆ ‌ಚಿತ್ರದುರ್ಗ ಗ್ರಾಮಾಂತರ ಠಾಣೆ ಸಿಪಿಐ ಬಾಲಚಂದ್ರ ನಾಯ್ಕ್ ಭೇಟಿ‌ನೀಡಿ ಪರಿಶೀಲನೆ ನಡೆಸಿದ್ದಾರೆ. ‌ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Share This Article
error: Content is protected !!
";