ಜಾತಿ ಜನಗಣತಿ: ಹಿನ್ನೋಟ -ಮುನ್ನೋಟ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಾಮಾಜಿಕ ನ್ಯಾಯ ಜಾಗೃತಿ ವೇದಿಕೆ ಆಶ್ರಯದಲ್ಲಿ ಇಂದು ಬೆಂಗಳೂರಿನಲ್ಲಿ ನಡೆದ
ಜಾತಿ ಜನಗಣತಿ: ಹಿನ್ನೋಟ -ಮುನ್ನೋಟವಿಚಾರ ಸಂಕೀರ್ಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪಾಲ್ಗೊಂಡಿದ್ದರು.

ಕೇಂದ್ರ ಸಚಿವರಾದ @byadavbjp ಜೀ ಅವರು ಮುಖ್ಯ ಭಾಷಣಕಾರರಾಗಿ ಆಗಮಿಸಿ ವಿವಿಧ ಹಿಂದುಳಿದ ಸಮುದಾಯಗಳ ಪ್ರಮುಖರೊಂದಿಗೆ ಸಂವಾದ ನಡೆಸಿದರು.

- Advertisement - 

ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಜನಗಣತಿಯೊಂದಿಗೆ ಜಾತಿ ಗಣತಿಯನ್ನು ಸೇರ್ಪಡೆ ಮಾಡಿರುವ ಐತಿಹಾಸಿಕ ನಿರ್ಧಾರವನ್ನು ಈ ಸಂದರ್ಭದಲ್ಲಿ ಸ್ವಾಗತಿಸಿ ಅಭಿನಂದಿಸಲಾಯಿತು.

ಕೇಂದ್ರ ಸರ್ಕಾರ ನಡೆಸುವ ಜಾತಿಗಣತಿಯಲ್ಲಿ ಹಿಂದುಳಿದ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ಔದ್ಯೋಗಿಕ ಹಾಗೂ ಇನ್ನಿತರ ಮಾಹಿತಿಯ ಸಹಿತ ಸಮೀಕ್ಷೆ ನಡೆಯಲಿದ್ದು, ಈಗಾಗಲೇ ರಾಜ್ಯದ ಕಾಂಗ್ರೆಸ್ ಸರ್ಕಾರ ಕಾಂತರಾಜು ವರದಿಯ ಹೆಸರಿನಲ್ಲಿ ಜನರ ₹165 ಕೋಟಿ ರೂ ಗಳನ್ನು ನಿರರ್ಥಕಗೊಂಡಿದ್ದು ರಾಜ್ಯ ಸರ್ಕಾರ ಮತ್ತೆ ಜಾತಿ ಸಮೀಕ್ಷೆ ಕೈಗೊಳ್ಳುವ ಅವಶ್ಯಕತೆ ಇಲ್ಲ ಎಂಬ ಒಕ್ಕೊರಲಿನ ಅಭಿಪ್ರಾಯ ವಿಚಾರ ಸಂಕಿರಣದಲ್ಲಿ ವ್ಯಕ್ತವಾಯಿತು. 

- Advertisement - 

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಡಾ. ಕೆ. ಭಕ್ತವತ್ಸಲ, ಹಿಂದುಳಿದವರ ಸಮುದಾಯಗಳ ಪರ ಚಿಂತಕರು ಹಾಗೂ ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಸದಸ್ಯರಾದ ಕೆ. ಮುಕುಡಪ್ಪ, ಪಕ್ಷದ ಎಲ್ಲಾ ಪ್ರಮುಖರು, ಮಾಜಿ ಸಚಿವರು, ಸಂಸದರು, ಶಾಸಕರು, ಮಾಜಿ ಶಾಸಕರು, ಪರಿಷತ್‌ ಸದಸ್ಯರು, ರಾಜ್ಯ ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.

 

 

 

 

Share This Article
error: Content is protected !!
";