ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
‘ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು’ ತತ್ವದ ಆಧಾರದ ಮೇಲೆ ರಾಜ್ಯಾದ್ಯಂತ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಯಶಸ್ವಿಯಾಗಿ ಅಂತಿಮ ಹಂತ ತಲುಪಿದೆ! ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.
ಇದು ಕೇವಲ ಅಂಕಿಅಂಶಗಳ ಸಂಗ್ರಹವಲ್ಲ, ಇದು ಸರ್ಕಾರದಿಂದ ಭವಿಷ್ಯದ ಜನಪರ ಯೋಜನೆಗಳನ್ನು ರೂಪಿಸಲು ಸಮಾಜದ ನಿಜವಾದ ಚಿತ್ರಣವನ್ನು ನೀಡುವ ಪ್ರಾಮಾಣಿಕ ಪ್ರಯತ್ನವಾಗಿದೆ.
ಈ ಮಹತ್ವದ ಕಾರ್ಯದಲ್ಲಿ ಶ್ರದ್ಧೆಯಿಂದ ಕೆಲಸ ಮಾಡುತ್ತಿರುವ ಗಣತಿದಾರರಿಗೆ ಅಭಿನಂದನೆಗಳು. ಇನ್ನೂ ಸಮೀಕ್ಷೆಗೆ ಒಳಪಡದ ಕುಟುಂಬದವರು, ದಯವಿಟ್ಟು ತಮ್ಮ ಮನೆಗೆ ಬರುವ ಗಣತಿದಾರರಿಗೆ ಅಗತ್ಯ ಮಾಹಿತಿ ನೀಡಿ ಸಹಕರಿಸಲು ಡಿಸಿಎಂ ಶಿವಕುಮಾರ್ ವಿನಂತಿಸಿದ್ದಾರೆ.

