ಜಾತಿ ಸಮೀಕ್ಷೆ ಅವಧಿ ವಿಸ್ತರಣೆ, ಅಕ್ಟೋಬರ್-18ರವರೆಗೆ ಶಾಲಾ ಕಾಲೇಜ್ ಗಳಿಗೆ ರಜೆ-ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಾಮಾಜಿಕ
, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು ಮಂಗಳವಾರ ಕೊನೆ ದಿನವಾಗಿದೆ. ಆದ್ರೆ, ನಿರೀಕ್ಷೆಯಂತೆ ಸಮೀಕ್ಷೆ ಮುಗಿಯದ ಕಾರಣ ಜಾತಿಗಣತಿ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದಲ್ಲಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.

- Advertisement - 

ಜಾತಿ ಸಮೀಕ್ಷೆ ಕಾರ್ಯಕ್ಕೆ ಶಿಕ್ಷಕರನ್ನು ಸಮೀಕ್ಷೆಗೆ ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ. ಇದರಿಂದ ಅಕ್ಟೋಬರ್​ 18ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ರಜೆ ನೀಡಲು ನಿರ್ಧರಿಸಲಾಗಿದೆ. ಈಗಾಲೇ ದಸರಾ ರಜೆಯಲ್ಲಿ ವಿದ್ಯಾರ್ಥಿಗಳಿಗೆ ಇದೀಗ ಜಾತಿಗಣತಿಯ ರಜೆ ಸಿಕ್ಕಂತಾಗಿದೆ ಎಂದು ಸಿಎಂ ಅವರು ಹೇಳಿದರು.

ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಮಂಗಳವಾರ ಕೊನೆ ದಿನವಾಗಿದ್ದರಿಂದ ಶಿಕ್ಷಕರನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಂಡು ಸಮೀಕ್ಷೆ ಪೂರ್ಣಗೊಳಿಸಲು ತೀರ್ಮಾನ ಸಭೆಯಲ್ಲಿ ನಿರ್ಧರಿಸಲಾಗಿದೆ. ಹೀಗಾಗಿ ಅಕ್ಟೋಬರ್​ 18ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ರಜೆ ನೀಡಲು ತೀರ್ಮಾನಿಸಲಾಗಿದೆ. ಸರ್ಕಾರಿ ಮತ್ತು ಅನುದಾನಿತ ಶಾಲಾ ಶಿಕ್ಷಕರಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ. ಹೀಗಾಗಿ ಖಾಸಗಿ ಶಾಲೆಗಳಿಗೆ ಈ ರಜೆ ಅನ್ವಯವಾಗುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

- Advertisement - 

ಅ.18ರವರೆಗೆ ಎಲ್ಲಾ ಶಾಲೆಗಳಿಗೆ (ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ) ರಜೆ ವಿಸ್ತರಣೆ ಮಾಡಲಾಗುವುದು. ರಜೆ ವಿಸ್ತರಣೆ ಮಾಡಬೇಕೆಂದು ಶಿಕ್ಷಕರ ಸಂಘ ಮನವಿ ಮಾಡಿತ್ತು. ಮನವಿ ಆಧರಿಸಿ ಅ.18ರವರೆಗೆ ಶಾಲೆಗಳಿಗೆ ರಜೆ ನೀಡಲಾಗುವುದು. ಸಮೀಕ್ಷೆಯಲ್ಲಿ 1.20 ಲಕ್ಷ ಶಿಕ್ಷಕರು ಭಾಗಿಯಾಗಿದ್ದಾರೆ. ಪೂರ್ಣ ಕೆಲಸ ಆಗಬೇಕು ಅಂದ್ರೆ ರಜೆ ವಿಸ್ತರಿಸುವಂತೆ ಕೇಳಿದ್ದಾರೆ. ಹಾಗಾಗಿ ಅಕ್ಟೋಬರ್-8ರಿಂದ ಅಕ್ಟೋಬರ್​ 18ರವರೆಗೆ ಶಾಲೆಗಳಿಗೆ ರಜೆ ನೀಡಲು ತೀರ್ಮಾನಿಸಲಾಗಿದೆ. ಪಿಯುಸಿ ಉಪನ್ಯಾಸಕರು ಸಮೀಕ್ಷೆಯಲ್ಲಿ ಭಾಗಿಯಾಗುವಂತಿಲ್ಲ. ಬೆಂಗಳೂರಿನಲ್ಲಿ 6,700 ಶಿಕ್ಷಕರು ಸಮೀಕ್ಷೆ ಭಾಗಿಯಾಗಿದ್ದಾರೆ ಎಂದು ಸಿಎಂ ಅವರು ಮಾಹಿತಿ ನೀಡಿದರು.

ನಿರೀಕ್ಷೆಗೆ ತಕ್ಕಂತೆ ಸಮೀಕ್ಷೆ ಆಗಿಲ್ಲ-
ಸೆಪ್ಟೆಂಬರ್ 22ರಿಂದ ಜಾತಿ ಸಮೀಕ್ಷೆ ಆರಂಭಿಸಲಾಗಿತ್ತು. ನಿರೀಕ್ಷೆಯಂತೆ ಎಲ್ಲ ಆಗಿದ್ದರೆ ಸರ್ವೆ ಇಂದಿಗೆ ಮುಗಿಸಬೇಕು ಎಂಬ ತೀರ್ಮಾನ ಮಾಡಿದ್ದೇವು. ಕೆಲವು ಜಿಲ್ಲೆಗಳಲ್ಲಿ ಜಾಸ್ತಿ ಸಮೀಕ್ಷೆ ಆಗಿದೆ. ಇನ್ನು ಕೆಲವು ಜಿಲ್ಲೆಗಳಲ್ಲಿ ಸರ್ವೆ ಕೆಲಸ ಪೂರ್ಣ ಆಗಿಲ್ಲ. ಕೊಪ್ಪಳದಲ್ಲಿ‌97% ಆಗಿದೆ
, ದಕ್ಷಿಣ ಕನ್ನಡ, ಉಡುಪಿಲ್ಲಿ 62% , 63% ಆಗಿದೆ. ನಮ್ಮ ನಿರೀಕ್ಷೆಗೆ ತಕ್ಕಂತೆ ಸಮೀಕ್ಷೆ ಆಗಿಲ್ಲ. 1.20 ಲಕ್ಷ ಶಿಕ್ಷಕರು ಸಮೀಕ್ಷೆಯಲ್ಲಿ ಭಾಗಿಯಗಿದ್ದಾರೆ. ಉಳಿದಿರುವ ಸಮೀಕ್ಷೆ ಏನು ಮಾಡಬೇಕು ಎಂಬ ಚರ್ಚೆ ಯಾಗಿದೆ ಎಂದರು.

ಬೆಂಗಳೂರಿನಲ್ಲಿ ದೀಪಾವಳಿಗೂ ಮುನ್ನ ಸಮೀಕ್ಷೆ ಅಂತ್ಯ-
ಬೆಂಗಳೂರಿನಲ್ಲಿ ದೀಪಾವಳಿಗೂ ಮುನ್ನ ಸರ್ವೆ ಕಾರ್ಯ ಮುಗಿಯಲಿದೆ. ಬೆಂಗಳೂರಿನಲ್ಲಿ ನಿತ್ಯ ಕನಿಷ್ಠ 10 ಮನೆ ಸರ್ವೆ ಮಾಡಬೇಕೆಂದು ಸೂಚನೆ ನೀಡಲಾಗಿದೆ. 12 ದಿನಗಳಲ್ಲಿ ಸರ್ವೆ ಮುಗಿಸಬೇಕು ಎಂಬ ಸೂಚನೆ ಕೊಡಲಾಗಿದೆ. ಶಿಕ್ಷಕರು ಸಮೀಕ್ಷೆ ಕಾರ್ಯ ಮುಗಿಸುವ ಭರವಸೆ ಕೊಟ್ಟಿದ್ದಾರೆ. ಸಮೀಕ್ಷೆ ಮಾಡಲು ಹಿಂದೇಟು ಹಾಕಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಸಮೀಕ್ಷೆ ಮಾಡುವವರಿಗೆ ಸೂಕ್ತ ರಕ್ಷಣೆ ನೀಡಲಾಗುವುದು ಎಂದು ಸಿಎಂ ಅವರು ತಿಳಿಸಿದರು.

ಮೃತ ಶಿಕ್ಷಕರ ಕುಟುಂಬಕ್ಕೆ 20 ಲಕ್ಷ ರೂ.ಪರಿಹಾರ-
ಸಾಮಾಜಿಕ
, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ವೇಳೆ ಕೆಲವು ಕಡೆಗಳಲ್ಲಿ ದುರಂತ ನಡೆದಿದ್ದು, ಸಮೀಕ್ಷೆ ಕಾರ್ಯದಲ್ಲಿದ್ದ ಮೂವರು ಶಿಕ್ಷಕರು ಸಾವನ್ನಪ್ಪಿದ್ದಾರೆ. ಅವರ ಕುಟುಂಬಕ್ಕೆ ತಲಾ 20 ಲಕ್ಷ ಪರಿಹಾರ ನೀಡುವಾಗಿ ಸಿಎಂ ಘೋಷಣೆ ಮಾಡಿದರು.

Share This Article
error: Content is protected !!
";