ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಅಲುಮ್ನಿ ಅಸೋಸಿಯೇಷನ್, ಕೃಷಿ ವಿಶ್ವವಿದ್ಯಾನಿಲಯ, ಹೆಬ್ಬಾಳ, ಬೆಂಗಳೂರು, ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ, ಬೆಂಗಳೂರು ಹಾಗೂ ತೋಟಗಾರಿಕೆ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ "ಮಾವು ಮೇಳ-2025"ರ ಉದ್ಘಾಟನೆಯನ್ನು ತೋಟಗಾರಿಕೆ ಇಲಾಖೆ ನಿರ್ದೇಶಕ ಡಿ. ಎಸ್. ರಮೇಶ್ ಇವರು ನೆರವೇರಿಸಿ ಇಂದು ಮತ್ತು ನಾಳೆ ಈ ಮೇಳವು ಮಾವು ಬೆಳೆಗಾರರ ಮತ್ತು ಗ್ರಾಹಕರ ನಡುವೆ ನೇರ ಸಂಪರ್ಕ ಕಲ್ಪಿಸುವ ಸೇತುವೆಯಾಗಿದೆ. ಇದರಿಂದ ರೈತರಿಗೆ ಉತ್ತಮ ಬೆಲೆ ಸಿಕ್ಕರೆ ಗ್ರಾಹಕರಿಗೆ ಕಡಿಮೆ ದರದಲ್ಲಿ ತಾಜ ಮಾವಿನಹಣ್ಣು ದೊರಕುತ್ತದೆ. ಇದರ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ತಿಳಿಸಿದರು. ವಿಶೇಷ ಅತಿಥಿಯಾಗಿ ಭಾಗವಹಿಸಿದ್ದ ಡಾ. ಕೆ. ಸಿ. ವೀರಣ್ಣ, ಕುಲಪತಿಗಳು, ಕ.ಪ.ಪ.ಮಿ.ವಿ.ವಿ., ಬೀದರ ಇವರು ಮಾತನಾಡಿ ಮಾವಿನ ಎಲ್ಲಾ ಜಾತಿಯ ತಳಿಗಳಿಗೆ ಉತ್ತಮ ಬೆಲೆ ಸಿಗುವುದಿಲ್ಲ. ಇಂತಹ ಮೇಳಗಳನ್ನು ನಿರಂತರವಾಗಿ ಏರ್ಪಡಿಸುವುದರಿಂದ ಮಧ್ಯವರ್ತಿಗಳ ಹಾವಳಿ ಇಲ್ಲದೆ ರೈತರಿಗೆ ಮತ್ತು ಗ್ರಾಹಕರಿಬ್ಬರಿಗೂ ಅನುಕೂಲಕರವಾಗಲಿದೆ ಎಂದು ತಿಳಿಸಿದರು.ಸಮಾರಂಭದ ಅಧ್ಯಕ್ಷತೆಯನ್ನು ಡಾ. ಹೆಚ್. ಎಲ್. ಹರೀಶ್, ಆಡಳಿತ ಮಂಡಳಿ ಸದಸ್ಯರು, ಕೃ.ವಿ.ವಿ., ಬೆಂಗಳೂರು ಇವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಡಾ. ಸಿ. ಜಿ. ನಾಗರಾಜು, ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ (ನಿ), ಬೆಂಗಳೂರು ಮತ್ತು ಅಲುಮ್ನಿ ಅಸೋಸಿಯೇಷನ್ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸದಸ್ಯರು ಉಪಸ್ಥಿತರಿದ್ದರು.
ಚಂದ್ರವಳ್ಳಿ ನ್ಯೂಸ್, ಬಾಗಲಕೋಟೆ: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ಗಳಿಗೆ ಬೆಂಕಿ ಇಟ್ಟು ಕಲ್ಲು ತೂರಾಟ ಮಾಡಿದ್ದ ಪ್ರಕರಣಕ್ಕೆ ಸಂಬಧಿಸಿದಂತೆ ಮೂರು ಪ್ರತ್ಯೇಕ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ರಾಷ್ಟ್ರೀಯ ಪಕ್ಷಗಳ ಭರಾಟೆಯಲ್ಲಿ ಅನೇಕ ಪ್ರಾದೇಶಿಕ ಪಕ್ಷಗಳು ಬಂದು ಹಾಗೇ ಕಣ್ಮರೆಯಾಗಿವೆ.ಈನಡುವೆ ಜೆಡಿಎಸ್ ಪಕ್ಷ 25…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರಕುತ್ತಿರುವ ವಿಷಯ ನಮ್ಮ ಸರ್ಕಾರದ ಗಮನಕ್ಕೆ ಬಂದಿದೆ. ಸಂಬಂಧಪಟ್ಟ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: “ಅವಳು ಬಿಟ್ಟು ಕೆಟ್ಟವಳಾ? ಪ್ರೀತಿಸಿ ಕೆಟ್ಟವಳಾ?” ಅವಳು ತನ್ನ ಬದುಕನ್ನ ತಾನೇ ಇಷ್ಟಪಟ್ಟ ರೀತಿಯಲ್ಲಿ ನಿಧಾನ……
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಯಿಂದಾಗಿ ವಾಣಿ ವಿಲಾಸ ಸಾಗರಕ್ಕೆ ನೀರಿನ ಒಳ ಹರಿವಾಗಿದೆ. ಆಗಸ್ಟ್-23ರಂದು ಶನಿವಾರ ಬೆಳಿಗ್ಗೆ 8 ಗಂಟೆ…
ಚಂದ್ರವಳ್ಳಿ ನ್ಯೂಸ್ ಹಿರಿಯೂರು: ರಾಷ್ಟ್ರೀಯ ಸುಸ್ಥಿರ ಕೃಷಿ ಅಭಿಯಾನ ಯೋಜನೆಯಡಿ ತಾಲೂಕಿನ ರೈತರಿಗೆ ಸಾಕಾಣಿಕೆ ಮಾಡಲು 1000 ಹಸುಗಳನ್ನು ಕೊಡಿಸಿಕೊಡಬೇಕೆಂದು ಕೃಷಿಕ ಸಮಾಜದ ಜಿಲ್ಲಾ ಪ್ರತಿನಿಧಿ ಕಂದಿಕೆರೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಕಡಿಮೆ ನೀರು ಮತ್ತು ಕಡಿಮೆ ನಿರ್ವಹಣೆಯ ಗೋಡಂಬಿ ಬೆಳೆ ಬಯಲುಸೀಮೆಗೆ ಸೂಕ್ತವಾಗಲಿದೆ ಎಂದು ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಮುಖ್ಯಸ್ಥ ಆರ್.ರಜನೀಕಾಂತ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ವಿಜಯನಗರ, ಕೊಪ್ಪಳ, ರಾಯಚೂರು ಮತ್ತು ಬಳ್ಳಾರಿ ಜಿಲ್ಲೆಯ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ ವಿಚಾರದಲ್ಲಿ ಈ ಭಾರಿ ಉತ್ತಮ ಮಳೆಯಾಗಿದ್ದರೂ ಸಹ ತುಂಗಭದ್ರಾ ಜಲಾಶಯಕ್ಕೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯಲ್ಲಿನ ಸಿಂದನೂರು ತಾಲ್ಲೂಕಿನ ರೈತರ ಪಂಪ್ ಸೆಟ್ಟುಗಳಿಗೆ ನಿರಂತರವಾಗಿ 7 ಗಂಟೆಗಳ ಕಾಲ 3 ಫೇಸ್ ವಿದ್ಯುತ್…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಸುಧಾರಿತ ತಾಂತ್ರಿಕತೆ ಹಾಗೂ ಅಂತರ ಬೆಳೆ ಅಳವಡಿಕೆಯಿಂದ ಅಡಿಕೆ ತೆಂಗು ಮತ್ತು ಬಾಳೆ ಬೆಳೆಯಲ್ಲಿ ಸುಸ್ಥಿರ ಇಳುವರಿ ಪಡೆಯಲು ಸಾಧ್ಯ ಎಂದು ಜಿಲ್ಲಾ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಸಾಂಪ್ರದಾಯಕ ಹರಳು ರೂಪದ ಯೂರಿಯಾ ಗೊಬ್ಬರಕ್ಕಿಂತ ನ್ಯಾನೋ ಯೂರಿಯಾ ಹೆಚ್ಚುಪಟ್ಟು ಪರಿಣಾಮಕಾರಿಯಾಗಿದ್ದು, ಬೆಳೆಗಳ ಮೇಲೆ ಸಿಂಪರಣೆಯಿಂದ ತ್ವರಿತವಾಗಿ ಪೋಷಕಾಂಶ ನೀಡುವುದಲ್ಲದೆ ಮಣ್ಣಿನ ಫಲವತ್ತತೆಯನ್ನು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಅವಧಿಗೂ ಮುನ್ನ ಸುರಿದ ಭಾರಿ ಮುಂಗಾರು ಮಳೆಯಿಂದ ತೆಂಗು, ಕಬ್ಬು, ಜೋಳ, ಹತ್ತಿ, ಕಾಫಿ, ಅಡಿಕೆ ಸೇರಿದಂತೆ ಅನೇಕ…
Sign in to your account
";
