India News

ಕಾಣೆಯಾಗಿದ್ದ ಮಹಿಳೆ 23 ವರ್ಷಗಳ ನಂತರ ಕುಟುಂಬಕ್ಕೆ ಸೇರ್ಪಡೆ

ಚಂದ್ರವಳ್ಳಿನ್ಯೂಸ್, ಬೆಂಗಳೂರು:  ಸುಮಾರು 23 ವರ್ಷಗಳ ಹಿಂದೆ ಕಾಣೆಯಾಗಿದ್ದ, ಬಳ್ಳಾರಿ ಜಿಲ್ಲೆಯ (ವಿಜಯನಗರ) ಹೊಸಪೇಟೆಯ ದಣನಾಯಕನಕೆರೆಯ ಸಾಕಮ್ಮ ಅವರು ಕುಟುಂಬಕ್ಕೆ ಸೇರ್ಪಡೆಯಾಗಲು ಕಾರಣರಾದ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್. ಪಿ ಅವರನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದ ವಿಜಯಕುಮಾರ ಜಿ., ಸಮಾಜ ಕಲ್ಯಾಣ ಇಲಾಖೆ ಕಾರ್ಯಾಚರಣೆ ತಂಡದವರನ್ನು ಹಾಗೂ ಕಾಣೆಯಾಗಿದ್ದ ಮಹಿಳೆ ಸಾಕಮ್ಮ ಅವರನ್ನು ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರು ಅಭಿನಂದಿಸಿದರು.                 ಬೆಂಗಳೂರು ನಗರದ, ಶಿವಾನಂದ ವೃತ್ತದ ಹತ್ತಿರವಿರುವ ಸಮಾಜ ಕಲ್ಯಾಣ ಇಲಾಖೆ ಸಚಿವರ ಅಧಿಕೃತ ನಿವಾಸದಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಸಚಿವರು ಮಾತನಾಡಿ, ಕಾಣೆಯಾಗಿದ್ದ ಮಹಿಳೆ ಹಾಗೂ ಇತರರನ್ನು ಅಭಿನಂದಿಸಿ, ಸಾಕಮ್ಮ ಅವರನ್ನು ಅವರ ಕುಟುಂಬದವರ ವಶಕ್ಕೆ ಹಸ್ತಾಂತರಿಸಿದರು.ಕಾಣೆಯಾಗಿದ್ದ 50 ವರ್ಷದ ಮಹಿಳೆ ಸಾಕಮ್ಮ ಅವರು ಹಲವು ವರ್ಷಗಳ ನಂತರ ಆಕೆಯ ಕುಟುಂಬವನ್ನು ಸುರಕ್ಷಿತವಾಗಿ ಸೇರಿರುವುದು ಸಂಭ್ರಮದ ವಿಷಯವಾಗಿದೆ. ಈ ಘಟನೆಯು ಸಲ್ಮಾನ್ ಖಾನ್ ಅವರ ಭಜರಂಗಿ ಭಾಯಿಜಾನ್ ಸಿನಿಮಾವನ್ನು ನೆನಪಿಸುತ್ತಿದೆ ಹಾಗೂ ಈ ಘಟನೆಗೆ ಕಾರಣವಾದ ಸಾಮಾಜಿಕ ಮಾಧ್ಯಮದ ಉತ್ತಮ ಬಳಕೆಯು ಶ್ಲಾಘನೀಯವಾದುದು ಎಂದರು.                 ಮಹಿಳೆಯು ಸುಮಾರು 23 ವರ್ಷಗಳ ಹಿಂದೆ ತನ್ನ ಕುಟುಂಬ ತೊರೆದು ಕಾಣೆಯಾಗಿರುತ್ತಾರೆ. ನಂತರ ಸುಮಾರು ಎರಡು ವರ್ಷಗಳ ಹಿಂದೆ ತಿಳಿಯದೇ ಕರ್ನಾಟಕದಿಂದ ರೈಲಿನ ಮೂಲಕ ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಗೆ ತಲುಪಿ, ಕುಟುಂಬದವನ್ನು ಸೇರಲು ಸಾಧ್ಯವಾಗದೇ ಪರದಾಡುತ್ತಿದ್ದಾರೆ ಎಂಬ ವಿಚಾರವನ್ನು ಕರ್ನಾಟಕ ಮೂಲದವರಾದ ಉತ್ತರಾಖಂಡದ ಐ.ಪಿ.ಎಸ್. ಅಧಿಕಾರಿ ರವಿನಂದನ್ ಅವರ ಮೂಲಕ ಮಾಹಿತಿ ಪಡೆದಿದ್ದ ಸಾಮಾಜಿಕ ಕಾರ್ಯಕರ್ತ ವಿಜಯಕುಮಾರ ಜಿ. ಎಂಬುವರು ಈ ವಿಷಯವನ್ನು 2024 ರ ಡಿಸೆಂಬರ್ 19 ರಂದು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್.ಪಿ ಅವರನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿ ಸಹಾಯ ಕೋರಿದ್ದರು. ಅದರಂತೆ ಪ್ರಧಾನ ಕಾರ್ಯದರ್ಶಿಯವರು ತಕ್ಷಣವೇ ಸಮಾಜ ಕಲ್ಯಾಣ ಇಲಾಖೆಯ ಸಹಾಯವಾಣಿಗೆ ಟ್ಯಾಗ್ ಮಾಡಿ ಮಹಿಳೆಯನ್ನು ಮರಳಿ ಕರ್ನಾಟಕಕ್ಕೆ ಕರೆತರುವ ನಿಟ್ಟಿಯಲ್ಲಿ ಕಾರ್ಯನಿರ್ವಹಿಸುವಂತೆ ಸೂಚಿಸಿರುತ್ತಾರೆ ಎಂದು ತಿಳಿಸಿದರು.                 ಸಾಕಮ್ಮನವರ ವಿಷಯವು ನನ್ನ ಗಮನಕ್ಕೆ ಬರುತ್ತಿದ್ದಂತೆ ಅವರನ್ನು ರಾಜ್ಯಕ್ಕೆ ಕರೆತರಲು ಅಗತ್ಯ ಕ್ರಮ ತೆಗೆದುಕೊಳ್ಳುವ ಮೂಲಕ, ಅಧಿಕಾರಿಗಳ ತಂಡವನ್ನು ವಿಮಾನದ ಮೂಲಕ ಕಳುಹಿಸಿ ಸಾಕಮ್ಮನವರನ್ನು ವಿಮಾನದಲ್ಲೇ ಸುರಕ್ಷಿತವಾಗಿ ಕರೆತರುವಂತೆ ಆದೇಶಿಸಿದೆ ಎಂದು ತಿಳಿಸಿದ ಸಚಿವರು, ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್.ಪಿ ಅವರಿಗೆ ಉತ್ತರಾಖಂಡದ ಐ.ಪಿ.ಎಸ್. ಅಧಿಕಾರಿ ರವಿನಂದನ್ ಅವರೊಂದಿಗೆ ಉತ್ತಮ ಓಡನಾಟ ಇದ್ದುರಿಂದ ಅವರನ್ನು ಸಂಪರ್ಕಿಸಿ ಈ ವಿಚಾರವನ್ನು ಮುಂದಿನ ಕ್ರಮಕ್ಕಾಗಿ ಇಲಾಖೆಯ ಅಧಿಕಾರಿಗಳು ಹಾಗೂ ಸಹಾಯವಾಣಿಗೆ ಅನುಕೂಲವಾಗುವಂತೆ ಅಗತ್ಯ ನಿರ್ದೇಶನಗಳನ್ನು ನೀಡಿದರು.                 ಸಮಾಜ ಕಲ್ಯಾಣ ಇಲಾಖೆಯ ಸಹಾಯವಾಣಿಯು ಈ ಕುರಿತು ಕೇಂದ್ರ ಪರಿಹಾರ ಸಮಿತಿಯ ಕಾರ್ಯದರ್ಶಿ ನಾಗೇಶ್, ಬಳ್ಳಾರಿ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಹಾಗೂ ವಿಜಯನಗರ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಂಜುನಾಥ್ ಅವರನ್ನು ಸಂರ್ಪಕಿಸಿತು. ಎರಡು ಜಿಲ್ಲೆಗಳ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಬಳ್ಳಾರಿ ಜಿಲ್ಲೆಯ ಜಿಲ್ಲಾಧಿಕಾರಿ ಪ್ರಶಾಂತ್ ಮಿಶ್ರಾ ಅವರೊಂದಿಗೆ ಸಮನ್ವಯ ಸಾಧಿಸಿ, ಜಿಲ್ಲಾಧಿಕಾರಿಯವರ ಅನುಮೋದನೆ ಪಡೆದು ಅವರ ನಿರ್ದೇಶನದಂತೆ ಓರ್ವ ಮಹಿಳಾ ಅಧಿಕಾರಿ ಸೇರಿದಂತೆ ಮೂವರು ಅಧಿಕಾರಿಗಳನ್ನು ಕಾರ್ಯಾಚರಣೆಗೆ ನಿಯೋಜಿಸಿದರು. ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ಸಮಾಜ ಕಲ್ಯಾಣ ಇಲಾಖೆಯ ಹಿರಿಯ ಅಧೀಕ್ಷಕ ಬಸವರಾಜ, ಬಳ್ಳಾರಿ ಜಿಲ್ಲೆಯ ಎನ್.ಪಿ.ಕೆ ಕೇಂದ್ರದ ವಾರ್ಡನ್, ಬಳ್ಳಾರಿ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ವಾರ್ಡನ್ ಭಾರತಿಯವರು ಕಾರ್ಯಾಚರಣೆ ತಂಡದಲ್ಲಿ ಇದ್ದರು ಎಂದು ತಿಳಿಸಿದರು.                 ಈ ತಂಡವು 2024 ರ ಡಿಸೆಂಬರ್ 21 ರಂದು ಚಂಡೀಗಢವನ್ನು ತಲುಪಿ, ನಂತರ ಸಾಕಮ್ಮ ಅವರು ಇದ್ದ ಹಿಮಾಚಲ ಪ್ರದೇಶದ ಮಂಡಿ ಜಲ್ಲೆಯ ಬಾಲ್‌ವಲಿ ಕಲ್ಯಾಣ ಸಭಾ (ವೃದ್ದಾಶ್ರಮ)ವನ್ನು ತಲುಪಿದರು. ಸಾಕಮ್ಮ ಅವರ ಆರೋಗ್ಯವನ್ನು ವಿಚಾರಿಸಿದ ಅಧಿಕಾರಿಗಳು ವೀಡಿಯೋ ಕರೆ ಮೂಲಕ ಸಾಕಮ್ಮ ಅವರ ಕುಟುಂಬದೊಂದಿಗೆ ಸಂಪರ್ಕ ಸಾಧಿಸುವಲ್ಲಿ ಯಶಸ್ವಿಯಾದರು.  ಈ ವೇಳೆ ಆಕೆಗೆ 3 ಮಕ್ಕಳಿದ್ದು, ಅವರು ತಮ್ಮ ತಾಯಿಯನ್ನು ಸ್ವೀಕರಿಸಲು ಕಾಯುತ್ತಿದ್ದಾರೆ ಎಂದು ಅಧಿಕಾರಿಗಳು ಖಚಿತಪಡಿಸಿಕೊಂಡು ವಿಡಿಯೋ ಮೂಲಕ ಮಾಹಿತಿ ನೀಡಿದರು. ಮರುದಿನ ಸಾಕಮ್ಮ ಅವರನ್ನು ನಮ್ಮ ಅಧಿಕಾರಿಗಳಿಗೆ ಬಾಲ್ ಕಣಿವೆ ಮ್ಯಾಜಿಸ್ಟ್ರೇಟ್ ಉಪ ವಿಭಾಗ ಸ್ಮೃತಿಕಾ ನೇಗಿ ಹಾಗೂ ಧರಮ್ ಶೀಲಾ ಅವರು ಮಹಿಳೆಯ ಹಸ್ತಾಂತರ ಪ್ರಕ್ರಿಯೆಯನ್ನು ಪೂರ್ಣಗೊಳಿದರು.  ಸಾಕಮ್ಮನವರು 2024 ರ ಡಿಸೆಂಬರ್ 24 ರ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಸಮಾಜ ಕಲ್ಯಾಣ ಇಲಾಖೆಯ ತಂಡದೊಂದಿಗೆ ಚಂಢೀಗಢ ವಿಮಾನ ನಿಲ್ದಾಣವನ್ನು ತಲುಪಿದ ನಂತರ ರಾತ್ರಿ 08.30ಕ್ಕೆ ದೇವನಹಳ್ಳಿ ವಿಮಾನ ನಿಲ್ದಾಣದ ಮೂಲಕ ಬೆಂಗಳೂರು ತಲುಪಿದರು ಎಂದು ಸಚಿವರು ಘಟನೆಯನ್ನು ವಿವರಿಸಿದರು. ಇಂದು ಸಾಕಮ್ಮ ಅವರನ್ನು ಅವರ ಕುಟುಂಬದವರ ವಶಕ್ಕೆ ಒಪ್ಪಿಸಲಾಗಿದೆ ಎಂದರು.  ಪತ್ರಿಕಾಗೋಷ್ಠಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ರಣದೀಪ್ ಡಿ. ಸೇರಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.

Just for You

ಚಿತ್ರದುರ್ಗದಲ್ಲಿ ವಿಮಾನ ನಿಲ್ದಾಣ, ಐತಿಹಾಸಿಕ ಪರಂಪರೆಗೆ ಮತ್ತೊಂದು ಕಿರೀಟ ಬೇಕಿದೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಚಿತ್ರದುರ್ಗ ಜಿಲ್ಲೆ ರಾಜ್ಯದ ಭೂಸುತ್ತಳತೆಯಲ್ಲಿ ಮಧ್ಯಭಾಗದಲ್ಲಿದೆ. ಚಿತ್ರದುರ್ಗ ಐತಿಹಾಸಿಕ ಪರಂಪರೆಯ ಇತಿಹಾಸವನ್ನು ಸಾರುತ್ತದೆ. ಏಳು ಸುತ್ತಿನ

ಕೊಳವೆ ಬಾವಿಯಲ್ಲಿ ಕಪ್ಪು ಬಣ್ಣದ ನೀರು, ಜನರಲ್ಲಿ ಆತಂಕ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ಕಾರ್ಖಾನೆಗಳಿಂದ ಹೊರ ಬರುವಂತಹ ರಾಸಾಯಿನಿಕ ತ್ಯಾಜ್ಯ ನೀರು ಅಂತರ ಜಲಕ್ಕೆ ಸೇರಿ ಕೊಳವೆ ಬಾವಿಗಳಲ್ಲಿನ ನೀರು

ಭದ್ರಾ ಯೋಜನೆಯಲ್ಲಿ ಕೈಬಿಟ್ಟ ಚಿಕ್ಕಸಿದ್ದವ್ವನಹಳ್ಳಿ ಕೆರೆ

ಹೆಚ್.ಸಿ.ಗಿರೀಶ್, ಹರಿಯಬ್ಬೆ, ಎಂ.ಎಲ್.ಗಿರಿಧರ, ಮಲ್ಲಪ್ಪನಹಳ್ಳಿ. ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಚಿತ್ರದುರ್ಗ, ಚಿಕ್ಕಮಗಳೂರು, ತುಮಕೂರು ಮತ್ತು ದಾವಣಗೆರೆ ಈ ನಾಲ್ಕು ಜಿಲ್ಲೆಗಳ

ಸಚಿವ ಸುಧಾಕರ್ ಆಪ್ತನೆಂದು ಹೇಳಿಕೊಂಡು ಪೊಲೀಸರ ಮೇಲೆ ಹಲ್ಲೆ ಮಾಡಿದ ನಾಲ್ವರ ಗ್ಯಾಂಗ್

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಸಚಿವ ಡಿ.ಸುಧಾಕರ್ ಆಪ್ತನೆಂದು ಹೇಳಿಕೊಂಡು ಪೊಲೀಸರ ಮೇಲೆ ಹಲ್ಲೆ ಮಾಡಿರುವ ಪ್ರಕರಣ ಚಿತ್ರದುರ್ಗ ನಗರದಲ್ಲಿ ಸೋಮವಾರ

Lasted India News

ಹೊಸ ಸೃಷ್ಟಿಗೆ ಕೀಲಿಕೈ ಆಗಿರುವ ಕೃತಕ ಬುದ್ಧಿಮತ್ತೆ: ಡಾ.ಆರ್.ಸಿ.ಜಿ. ಗಮಗೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು; ಕೃತಕ ಬುದ್ದಿಮತ್ತೆಯು(ಎ.ಐ) ನಮ್ಮ ಗತಿಸಿದ ಭಾರತೀಯ ಐತಿಹಾಸಿಕ ಸನ್ನಿವೇಶಗಳನ್ನು ಮರುಸೃಷ್ಟಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ಶ್ರೀಲಂಕಾ ಕೊಲಂಬಿಯಾ ವಿಶ್ವವಿದ್ಯಾಲಯ  ರಾಷ್ಟ್ರೀಯ ಗ್ರಂಥಾಲಯ ಮತ್ತು

ಭಾರತೀಯ ತೈಲ ನಿಮಗದ ಅಧ್ಯಕ್ಷರಾಗಿ ವಿ.ಸತೀಶ್ ಕುಮಾರ್ ಅಧಿಕಾರ ಸ್ವೀಕಾರ  

ಚಂದ್ರವಳ್ಳಿ ನ್ಯೂಸ್, ಬೆಂಗಳೂರು; ಭಾರತೀಯ ತೈಲ ನಿಗಮದ ಅಧ್ಯಕ್ಷರಾಗಿ ವಿ. ಸತೀಶ್ ಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್‌ನ ಮಾರುಕಟ್ಟೆ ವಿಭಾಗದ ನಿರ್ದೇಶಕರಾಗಿ   2021

ತುಮಕೂರು-ಯಶವಂತಪುರ ಮಾರ್ಗವಾಗಿ ಫ್ರೆಂಡ್ಲಿ ಮೆಮು ಟ್ರೈನ್ ಸರ್ವಿಸ್ ರೈಲು ಓಡಾಟಕ್ಕೆ ಅಸ್ತು

ಚಂದ್ರವಳ್ಳಿ ನ್ಯೂಸ್, ನವದೆಹಲಿ: ತುಮಕೂರು ಜನತೆಯ ಬಹುದಿನಗಳ ಬೇಡಿಕೆಯಾದ  ರೆಗ್ಯುಲರ್ ಪ್ಯಾಸೆಂಜರ್ ಫ್ರೆಂಡ್ಲಿ ಮೆಮು ಟ್ರೈನ್ ಸರ್ವಿಸ್ ಓಡಾಟಕ್ಕೆ ರೈಲ್ವೆ ಇಲಾಖೆ ಅನುಮೋದನೆ ನೀಡಿರುವುದಾಗಿ ಕೇಂದ್ರ  ಸಚಿವ

ಕ್ಯಾನ್ಸರ್  ಮತ್ತು  ಭವಿಷ್ಯದಲ್ಲಿ ಆರೋಗ್ಯದ ಸವಾಲುಗಳು…

ಚಂದ್ರವಳ್ಳಿ ನ್ಯೂಸ್, ಬೆಂಗಳೂರು ಕ್ಯಾನ್ಸರ್  ಮತ್ತು  ಭವಿಷ್ಯದಲ್ಲಿ ಆರೋಗ್ಯದ ಸವಾಲುಗಳು. ಸಾವನ್ನು ಘನತೆಯಿಂದ ಸ್ವೀಕರಿಸುವ ಮನೋಭಾವ...ಕೆಲವು ವರ್ಷಗಳ ಹಿಂದೆ ಮಾಧ್ಯಮದಲ್ಲಿ ಓದಿದ ಸುದ್ದಿ.... ಅಮೆರಿಕಾದ ಪ್ರಖ್ಯಾತ ಕ್ಯಾನ್ಸರ್‌

ಸರ್ಕಾರ ಅಸ್ಥಿರಗೊಳಿಸಲು ಕೋಮುವಾದಿ ಬಿಜೆಪಿ ಯತ್ನ-ಲಕ್ಷ್ಮೀ ಹೆಬ್ಬಾಳ್ಕರ್

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಹೊರಟಿರುವ ಕೋಮುವಾದಿ ಬಿಜೆಪಿ ವಿರುದ್ದ ಕಾರ್ಯಕರ್ತರು ಪುಟಿದೇಳಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಲಕ್ಷ್ಮಿಹೆಬ್ಬಾಳ್ಕರ್

ಸಿಲಿಂಡರ್ ದರ ಮತ್ತೆ ಹೆಚ್ಚಳ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು : ದೇಶದಲ್ಲಿ ವಾಣಿಜ್ಯ ಎಲ್​ಪಿಜಿ ಸಿಲಿಂಡರ್​ ಬೆಲೆ ಮತ್ತೆ ಏರಿಕೆಯಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್

ರಾಜ್ಯಪಾಲರ ಹುದ್ದೆಯನ್ನೇ ರದ್ದುಗೊಳಿಸಬೇಕು”-ಕಾಂಗ್ರೆಸ್‌ಅಭಿಷೇಕ್ ಸಿಂಘ್ವಿ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ದೇಶದ ಬಹುತೇಕ ರಾಜ್ಯಗಳ ರಾಜ್ಯಪಾಲರು ಮತ್ತು ಪ್ರತಿಪಕ್ಷಗಳ ಆಡಳಿತದ ರಾಜ್ಯ ಸರ್ಕಾರಗಳ ನಡುವಿನ ಘರ್ಷಣೆಯು ತಾರಕಕ್ಕೇರುತ್ತಿರುವ ನಿದರ್ಶನಗಳ ನಡುವೆ, “ರಾಜ್ಯಪಾಲರ ಹುದ್ದೆಯನ್ನೇ ರದ್ದುಗೊಳಿಸಬೇಕು

ಸಾವಿರಾರು ವಿದ್ಯಾರ್ಥಿಗಳ ಬದುಕು ರೂಪಿಸಿದ ಎನ್‌ಇಎಸ್

ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ : ಸಾವಿರಾರು ವಿದ್ಯಾರ್ಥಿಗಳ ಬದುಕಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಟ್ಟ ಸಂಸ್ಥೆ ರಾಷ್ಟ್ರೀಯ ಶಿಕ್ಷಣ ಸಮಿತಿ ಎಂದು ವಿಧಾನ ಪರಿಷತ್ ಸದಸ್ಯ, ಆಚಾರ್ಯ ತುಳಸಿ

error: Content is protected !!
";