ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಿಂದುಳಿದ ವರ್ಗಗಳ ನಾಯಕ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಮನೆಗೆ ದಿಢೀರ್ ಭೇಟಿ ನೀಡಿ ಕೆಲ ಸಮಯ ಇಬ್ಬರೂ ಚರ್ಚಿಸಿರುವು ಕುತೂಹಲ ಮೂಡಿಸಿದೆ. ಒಂದೆಡೆ ಮುಖ್ಯಮಂತ್ರಿಗಳ ಬದಲಾವಣೆ, ಸಂಪುಟ ಪುನಾರಚನೆ ಕುರಿತು ಚರ್ಚೆಗಳು ಆರಂಭವಾಗಿರುವ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಜಿಪಂ, ತಾಪಂ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಜೆಡಿಎಸ್ ಸಜ್ಜಾಗುತ್ತಿದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ…
ಚಂದ್ರವಳ್ಳಿ ನ್ಯೂಸ್, ಬಳ್ಳಾರಿ: ನಗರದ ಹೊರವಲಯದ ತಾಳೂರು ರಸ್ತೆಯಲ್ಲಿರುವ ಖಾಸಗಿ ಗುರುಕುಲ ಶಾಲೆಯ ವಸತಿ ನಿಲಯದಲ್ಲಿ ನಡೆದ ಭೀಕರ ಘಟನೆಯೊಂದು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ದಾವಣಗೆರೆ-ಚಿತ್ರದುರ್ಗ ನಡುವಿನ ನೇರ ರೈಲ್ವೇ ಮಾರ್ಗ ಕಾಮಗಾರಿ 2027ರ ಜೂನ್ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ. ಇದರ ಜೊತೆಗೆ…
ಹೆಚ್.ಸಿ ಗಿರೀಶ್, ಹರಿಯಬ್ಬೆ. ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಸತತ ಪರಿಶ್ರಮ, ಶದ್ಧೆ ಇದ್ದರೆ ಯಾವುದೇ ಕಠಿಣ ಸಾಧನೆ ಮಾಡಬಹುದು ಎನ್ನುವುದನ್ನ…
ಚಂದ್ರವಳ್ಳಿ ನ್ಯೂಸ್, ಬೆಳಗಾವಿ: ಡಿಸೆಂಬರ್-26 ಮತ್ತು 27 ರಂದು ಎರಡು ದಿನಗಳ ಕಾಲ ನಡೆಯುವ ‘ಗಾಂಧಿ ಭಾರತ’ ಹೆಸರಿನ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ದೇಶದ ವಿವಿಧೆಡೆಯಿಂದ ಕಾಂಗ್ರೆಸ್…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ದಕ್ಷಿಣ ಭಾರತದಲ್ಲೇ ಜಾನುವಾರುಗಳ ಜಾತ್ರೆಗೆ ಶ್ರೀ ಘಾಟಿ ಸುಬ್ರಮಣ್ಯ ಜಾನುವಾರು ಜಾತ್ರೆ ಪ್ರಖ್ಯಾತಿಯನ್ನು ಪಡೆದಿದೆ. ತಮಿಳುನಾಡು, ಆಂಧ್ರ, ಮಹಾರಾಷ್ಟ್ರ ಮುಂತಾದ ರಾಜ್ಯಗಳ ಜಾನುವಾರು…
ಚಂದ್ರವಳ್ಳಿ ನ್ಯೂಸ್, ಕಲಬುರಗಿ: ಯುವ ಗುತ್ತಿಗೆದಾರರೊಬ್ಬರು ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾನೆ. 7 ಪುಟಗಳ ಡೆತ್ನೋಟ್…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆಪ್ತನಿಂದ ಕೊಲೆ ಬೆದರಿಕೆ ಆರೋಪ ಕೇಳಿ ಬಂದಿದ್ದು, ಬೀದರ್ನಲ್ಲಿ ಚಲಿಸುತ್ತಿದ್ದ ರೈಲಿಗೆ ತಲೆ…
ಚಂದ್ರವಳ್ಳಿ ನ್ಯೂಸ್, ಬೆಳಗಾವಿ: 1924ರಲ್ಲಿ ಮಹಾತ್ಮ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಸ್ಮರಣಾರ್ಥ ಬೆಳಗಾವಿಯ ವೀರಸೌಧದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕಾರಿ…
ಚಂದ್ರವಳ್ಳಿನ್ಯೂಸ್, ಬೆಂಗಳೂರು: ಸುಮಾರು 23 ವರ್ಷಗಳ ಹಿಂದೆ ಕಾಣೆಯಾಗಿದ್ದ, ಬಳ್ಳಾರಿ ಜಿಲ್ಲೆಯ (ವಿಜಯನಗರ) ಹೊಸಪೇಟೆಯ ದಣನಾಯಕನಕೆರೆಯ ಸಾಕಮ್ಮ ಅವರು ಕುಟುಂಬಕ್ಕೆ ಸೇರ್ಪಡೆಯಾಗಲು ಕಾರಣರಾದ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್. ಪಿ ಅವರನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದ ವಿಜಯಕುಮಾರ ಜಿ., ಸಮಾಜ ಕಲ್ಯಾಣ ಇಲಾಖೆ ಕಾರ್ಯಾಚರಣೆ ತಂಡದವರನ್ನು ಹಾಗೂ ಕಾಣೆಯಾಗಿದ್ದ ಮಹಿಳೆ ಸಾಕಮ್ಮ ಅವರನ್ನು ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರು ಅಭಿನಂದಿಸಿದರು. ಬೆಂಗಳೂರು ನಗರದ, ಶಿವಾನಂದ ವೃತ್ತದ ಹತ್ತಿರವಿರುವ ಸಮಾಜ ಕಲ್ಯಾಣ ಇಲಾಖೆ ಸಚಿವರ ಅಧಿಕೃತ ನಿವಾಸದಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಸಚಿವರು ಮಾತನಾಡಿ, ಕಾಣೆಯಾಗಿದ್ದ ಮಹಿಳೆ ಹಾಗೂ ಇತರರನ್ನು ಅಭಿನಂದಿಸಿ, ಸಾಕಮ್ಮ ಅವರನ್ನು ಅವರ ಕುಟುಂಬದವರ ವಶಕ್ಕೆ ಹಸ್ತಾಂತರಿಸಿದರು.ಕಾಣೆಯಾಗಿದ್ದ 50 ವರ್ಷದ ಮಹಿಳೆ ಸಾಕಮ್ಮ ಅವರು ಹಲವು ವರ್ಷಗಳ ನಂತರ ಆಕೆಯ ಕುಟುಂಬವನ್ನು ಸುರಕ್ಷಿತವಾಗಿ ಸೇರಿರುವುದು ಸಂಭ್ರಮದ ವಿಷಯವಾಗಿದೆ. ಈ ಘಟನೆಯು ಸಲ್ಮಾನ್ ಖಾನ್ ಅವರ ಭಜರಂಗಿ ಭಾಯಿಜಾನ್ ಸಿನಿಮಾವನ್ನು ನೆನಪಿಸುತ್ತಿದೆ ಹಾಗೂ ಈ ಘಟನೆಗೆ ಕಾರಣವಾದ ಸಾಮಾಜಿಕ ಮಾಧ್ಯಮದ ಉತ್ತಮ ಬಳಕೆಯು ಶ್ಲಾಘನೀಯವಾದುದು ಎಂದರು. ಮಹಿಳೆಯು ಸುಮಾರು 23 ವರ್ಷಗಳ ಹಿಂದೆ ತನ್ನ ಕುಟುಂಬ ತೊರೆದು ಕಾಣೆಯಾಗಿರುತ್ತಾರೆ. ನಂತರ ಸುಮಾರು ಎರಡು ವರ್ಷಗಳ ಹಿಂದೆ ತಿಳಿಯದೇ ಕರ್ನಾಟಕದಿಂದ ರೈಲಿನ ಮೂಲಕ ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಗೆ ತಲುಪಿ, ಕುಟುಂಬದವನ್ನು ಸೇರಲು ಸಾಧ್ಯವಾಗದೇ ಪರದಾಡುತ್ತಿದ್ದಾರೆ ಎಂಬ ವಿಚಾರವನ್ನು ಕರ್ನಾಟಕ ಮೂಲದವರಾದ ಉತ್ತರಾಖಂಡದ ಐ.ಪಿ.ಎಸ್. ಅಧಿಕಾರಿ ರವಿನಂದನ್ ಅವರ ಮೂಲಕ ಮಾಹಿತಿ ಪಡೆದಿದ್ದ ಸಾಮಾಜಿಕ ಕಾರ್ಯಕರ್ತ ವಿಜಯಕುಮಾರ ಜಿ. ಎಂಬುವರು ಈ ವಿಷಯವನ್ನು 2024 ರ ಡಿಸೆಂಬರ್ 19 ರಂದು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್.ಪಿ ಅವರನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿ ಸಹಾಯ ಕೋರಿದ್ದರು. ಅದರಂತೆ ಪ್ರಧಾನ ಕಾರ್ಯದರ್ಶಿಯವರು ತಕ್ಷಣವೇ ಸಮಾಜ ಕಲ್ಯಾಣ ಇಲಾಖೆಯ ಸಹಾಯವಾಣಿಗೆ ಟ್ಯಾಗ್ ಮಾಡಿ ಮಹಿಳೆಯನ್ನು ಮರಳಿ ಕರ್ನಾಟಕಕ್ಕೆ ಕರೆತರುವ ನಿಟ್ಟಿಯಲ್ಲಿ ಕಾರ್ಯನಿರ್ವಹಿಸುವಂತೆ ಸೂಚಿಸಿರುತ್ತಾರೆ ಎಂದು ತಿಳಿಸಿದರು. ಸಾಕಮ್ಮನವರ ವಿಷಯವು ನನ್ನ ಗಮನಕ್ಕೆ ಬರುತ್ತಿದ್ದಂತೆ ಅವರನ್ನು ರಾಜ್ಯಕ್ಕೆ ಕರೆತರಲು ಅಗತ್ಯ ಕ್ರಮ ತೆಗೆದುಕೊಳ್ಳುವ ಮೂಲಕ, ಅಧಿಕಾರಿಗಳ ತಂಡವನ್ನು ವಿಮಾನದ ಮೂಲಕ ಕಳುಹಿಸಿ ಸಾಕಮ್ಮನವರನ್ನು ವಿಮಾನದಲ್ಲೇ ಸುರಕ್ಷಿತವಾಗಿ ಕರೆತರುವಂತೆ ಆದೇಶಿಸಿದೆ ಎಂದು ತಿಳಿಸಿದ ಸಚಿವರು, ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್.ಪಿ ಅವರಿಗೆ ಉತ್ತರಾಖಂಡದ ಐ.ಪಿ.ಎಸ್. ಅಧಿಕಾರಿ ರವಿನಂದನ್ ಅವರೊಂದಿಗೆ ಉತ್ತಮ ಓಡನಾಟ ಇದ್ದುರಿಂದ ಅವರನ್ನು ಸಂಪರ್ಕಿಸಿ ಈ ವಿಚಾರವನ್ನು ಮುಂದಿನ ಕ್ರಮಕ್ಕಾಗಿ ಇಲಾಖೆಯ ಅಧಿಕಾರಿಗಳು ಹಾಗೂ ಸಹಾಯವಾಣಿಗೆ ಅನುಕೂಲವಾಗುವಂತೆ ಅಗತ್ಯ ನಿರ್ದೇಶನಗಳನ್ನು ನೀಡಿದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯವಾಣಿಯು ಈ ಕುರಿತು ಕೇಂದ್ರ ಪರಿಹಾರ ಸಮಿತಿಯ ಕಾರ್ಯದರ್ಶಿ ನಾಗೇಶ್, ಬಳ್ಳಾರಿ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಹಾಗೂ ವಿಜಯನಗರ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಂಜುನಾಥ್ ಅವರನ್ನು ಸಂರ್ಪಕಿಸಿತು. ಎರಡು ಜಿಲ್ಲೆಗಳ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಬಳ್ಳಾರಿ ಜಿಲ್ಲೆಯ ಜಿಲ್ಲಾಧಿಕಾರಿ ಪ್ರಶಾಂತ್ ಮಿಶ್ರಾ ಅವರೊಂದಿಗೆ ಸಮನ್ವಯ ಸಾಧಿಸಿ, ಜಿಲ್ಲಾಧಿಕಾರಿಯವರ ಅನುಮೋದನೆ ಪಡೆದು ಅವರ ನಿರ್ದೇಶನದಂತೆ ಓರ್ವ ಮಹಿಳಾ ಅಧಿಕಾರಿ ಸೇರಿದಂತೆ ಮೂವರು ಅಧಿಕಾರಿಗಳನ್ನು ಕಾರ್ಯಾಚರಣೆಗೆ ನಿಯೋಜಿಸಿದರು. ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ಸಮಾಜ ಕಲ್ಯಾಣ ಇಲಾಖೆಯ ಹಿರಿಯ ಅಧೀಕ್ಷಕ ಬಸವರಾಜ, ಬಳ್ಳಾರಿ ಜಿಲ್ಲೆಯ ಎನ್.ಪಿ.ಕೆ ಕೇಂದ್ರದ ವಾರ್ಡನ್, ಬಳ್ಳಾರಿ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ವಾರ್ಡನ್ ಭಾರತಿಯವರು ಕಾರ್ಯಾಚರಣೆ ತಂಡದಲ್ಲಿ ಇದ್ದರು ಎಂದು ತಿಳಿಸಿದರು. ಈ ತಂಡವು 2024 ರ ಡಿಸೆಂಬರ್ 21 ರಂದು ಚಂಡೀಗಢವನ್ನು ತಲುಪಿ, ನಂತರ ಸಾಕಮ್ಮ ಅವರು ಇದ್ದ ಹಿಮಾಚಲ ಪ್ರದೇಶದ ಮಂಡಿ ಜಲ್ಲೆಯ ಬಾಲ್‌ವಲಿ ಕಲ್ಯಾಣ ಸಭಾ (ವೃದ್ದಾಶ್ರಮ)ವನ್ನು ತಲುಪಿದರು. ಸಾಕಮ್ಮ ಅವರ ಆರೋಗ್ಯವನ್ನು ವಿಚಾರಿಸಿದ ಅಧಿಕಾರಿಗಳು ವೀಡಿಯೋ ಕರೆ ಮೂಲಕ ಸಾಕಮ್ಮ ಅವರ ಕುಟುಂಬದೊಂದಿಗೆ ಸಂಪರ್ಕ ಸಾಧಿಸುವಲ್ಲಿ ಯಶಸ್ವಿಯಾದರು. ಈ ವೇಳೆ ಆಕೆಗೆ 3 ಮಕ್ಕಳಿದ್ದು, ಅವರು ತಮ್ಮ ತಾಯಿಯನ್ನು ಸ್ವೀಕರಿಸಲು ಕಾಯುತ್ತಿದ್ದಾರೆ ಎಂದು ಅಧಿಕಾರಿಗಳು ಖಚಿತಪಡಿಸಿಕೊಂಡು ವಿಡಿಯೋ ಮೂಲಕ ಮಾಹಿತಿ ನೀಡಿದರು. ಮರುದಿನ ಸಾಕಮ್ಮ ಅವರನ್ನು ನಮ್ಮ ಅಧಿಕಾರಿಗಳಿಗೆ ಬಾಲ್ ಕಣಿವೆ ಮ್ಯಾಜಿಸ್ಟ್ರೇಟ್ ಉಪ ವಿಭಾಗ ಸ್ಮೃತಿಕಾ ನೇಗಿ ಹಾಗೂ ಧರಮ್ ಶೀಲಾ ಅವರು ಮಹಿಳೆಯ ಹಸ್ತಾಂತರ ಪ್ರಕ್ರಿಯೆಯನ್ನು ಪೂರ್ಣಗೊಳಿದರು. ಸಾಕಮ್ಮನವರು 2024 ರ ಡಿಸೆಂಬರ್ 24 ರ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಸಮಾಜ ಕಲ್ಯಾಣ ಇಲಾಖೆಯ ತಂಡದೊಂದಿಗೆ ಚಂಢೀಗಢ ವಿಮಾನ ನಿಲ್ದಾಣವನ್ನು ತಲುಪಿದ ನಂತರ ರಾತ್ರಿ 08.30ಕ್ಕೆ ದೇವನಹಳ್ಳಿ ವಿಮಾನ ನಿಲ್ದಾಣದ ಮೂಲಕ ಬೆಂಗಳೂರು ತಲುಪಿದರು ಎಂದು ಸಚಿವರು ಘಟನೆಯನ್ನು ವಿವರಿಸಿದರು. ಇಂದು ಸಾಕಮ್ಮ ಅವರನ್ನು ಅವರ ಕುಟುಂಬದವರ ವಶಕ್ಕೆ ಒಪ್ಪಿಸಲಾಗಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ರಣದೀಪ್ ಡಿ. ಸೇರಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಚಂದ್ರವಳ್ಳಿ ನ್ಯೂಸ್, ಬೆಳಗಾವಿ: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಬಂಧನ ವೇಳೆ ಕರ್ತವ್ಯಲೋಪ ಆರೋಪದಡಿ ಖಾನಾಪುರ ಸಿಪಿಐ ಮಂಜುನಾಥ್ ನಾಯ್ಕ ಅವರನ್ನು ಅಮಾನತುಗೊಳಿಸಿ ಐಜಿಪಿ ವಿಕಾಶ್…
ಚಂದ್ರವಳ್ಳಿ ನ್ಯೂಸ್, ಬೆಳಗಾವಿ: ಕಾಂಗ್ರೆಸ್ ವತಿಯಿಂದ ಡಿ.27ರಂದು ನಡೆಯಲಿರುವ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಿನ್ನೆಲೆಯ ಸಮಾವೇಶಕ್ಕೆ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಎಂದು…
Sign in to your account
";
