ಚಂದ್ರವಳ್ಳಿ ನ್ಯೂಸ್, ಬೆಳಗಾವಿ: ರಾಜ್ಯದಲ್ಲಿ ನಕಲಿ ವೈದ್ಯರ ಕ್ಲಿನಿಕ್ ಗಳ ವಿರುದ್ಧ ಕೆ. ಪಿ. ಎಂ. ಇ. ತಿದ್ದುಪಡಿ ಅಧಿನಿಯಮದಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಗೋವಿಂದ ರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ಕ್ಲಿನಿಕ್ ಗಳನ್ನು ಪ್ರಾರಂಭಿಸಲು ಕೆ.ಪಿ.ಎಂ.ಇ ತಿದ್ದುಪಡಿ ಅಧಿನಿಯಮ 2017 ಸೆಕ್ಷನ್ 5 ರಂತೆ ನೋಂದಣಿಗಾಗಿ ಅರ್ಜಿಯನ್ನು ಸಲ್ಲಿಸಿ, ನಿಯಾಮಾನುಸಾರ ಕೆ.ಪಿ.ಎಂ.ಇ ನೋಂದಣಿ ಪ್ರಮಾಣಪತ್ರವನ್ನು ಪಡೆದು, ಖಾಸಗಿ ವೈದ್ಯಕೀಯ ಸಂಸ್ಥೆಯನ್ನು ಪ್ರಾರಂಭಿಸಬಹುದಾಗಿರುತ್ತದೆ. ಸದರಿ ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ಕ್ರಮಕೈಗೊಳ್ಳಲು, ಕೆ.ಪಿ.ಎಂ.ಇ ಅಧಿನಿಯಮ 2007, ಸೆಕ್ಷನ್ 4. ರನ್ವಯ ನೊಂದಣಿ ಮತ್ತು ಕುಂದುಕೊರತೆ ಪ್ರಾಧಿಕಾರವಾಗಿ ಪ್ರತಿಯೊಂದು ಜಿಲ್ಲೆಯಲ್ಲಿ ಒಂದು ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯ ಅಧ್ಯಕ್ಷರಾದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು (ಸಮಿತಿಯ ಸದಸ್ಯ ಕಾರ್ಯದರ್ಶಿಗಳು) ಹಾಗೂ ಸಮಿತಿಯ ಇತರೆ ಸದಸ್ಯರಾದ ಜಿಲ್ಲಾ ಆಯುಷ್ ಅಧಿಕಾರಿ, ಭಾರತೀಯ ವೈದ್ಯಕೀಯ ಸಂಘದಿಂದ ಓರ್ವ ಸದಸ್ಯರು ಮತ್ತು ಓರ್ವ ಮಹಿಳಾ ಪ್ರತಿನಿಧಿಯನ್ನೊಳಗೊಂಡಿರುತ್ತದೆಎಂದರು. ಜನವರಿ 2021 ರಿಂದ ಇಲ್ಲಿಯವರೆಗೆ ಕೋಲಾರ ಜಿಲ್ಲೆಯಲ್ಲಿ 134 ನಕಲಿ ವೈದ್ಯರ ಕ್ಲಿನಿಕ್ಗಳನ್ನು ಪತ್ತೆ ಹಚ್ಚಲಾಗಿದೆ. ಈ ಪೈಕಿ 16 ಕ್ಲಿನಿಕ್ಗಳನ್ನು ಸೀಜ್ ಮಾಡಲಾಗಿದೆ, 8 ಪಿ. ಸಿ .ಆರ್ ಪ್ರಕರಣಗಳು ದಾಖಲಾಗಿವೆ, 1 ಪ್ರಕರಣವು ಎಫ್. ಐ.ಆರ್ ಆಗಿದೆ, 7 ಪ್ರಕರಣಗಳು ವಿಚಾರಣೆ ಹಂತದಲ್ಲಿವೆ ಮತ್ತು ಈವರೆಗೆ 102 ಕ್ಲಿನಿಕ್ಗಳನ್ನು ಮುಚ್ಚಿಸಿ ಕ್ರಮಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಹೀರೋ ಫ್ಯೂಚರ್ ಎನರ್ಜಿಸ್ ಕರ್ನಾಟಕದ ಚಿತ್ರದುರ್ಗದಲ್ಲಿ 29 ಎಂಡಬ್ಲ್ಯೂ ಪಿ ಮುಕ್ತ ಪ್ರವೇಶ ಸೋಲಾರ್ ಪ್ರಾಜೆಕ್ಟ್…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಮಧ್ಯ ಕರ್ನಾಟಕದ ಏಕೈಕ ರೈತರ ಜೀವನಾಡಿ ವಾಣಿವಿಲಾಸ ಜಲಾಶಯದ ನೀರಿನ ಮಟ್ಟ ಸೋಮವಾರ 128.90 ಅಡಿಗೆ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಮಧ್ಯ ಕರ್ನಾಟಕದ ಏಕೈಕ ರೈತರ ಜೀವನಾಡಿ ವಾಣಿವಿಲಾಸ ಜಲಾಶಯದ ನೀರಿನ ಮಟ್ಟ ಭಾನುವಾರ 129.20 ಅಡಿಗೆ…
ಚಂದ್ರವಳ್ಳಿ ನ್ಯೂಸ್, ಬೆಳಗಾವಿ/ಬೆಂಗಳೂರು: ಮೂಲಸೌಲಭ್ಯ ಅಭಿವೃದ್ಧಿ ಇಲಾಖೆಯು ಬೆಂಗಳೂರಿಗೆ 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡುವ ಪ್ರಸ್ತಾವನೆಯ ಕುರಿತು…
ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು: ಹಸುಗಳ ಕೆಚ್ಚಲು ಕೊಯ್ದಿರುವ ಘಟನೆ ಮಾಸುವ ಮುನ್ನವೇ ದುಷ್ಕರ್ಮಿಗಳು ಇದರ ಮಧ್ಯೆ ಮೂಡಿಗೆರೆ ತಾಲೂಕಿನ ಬಣಕಲ್ಗ್ರಾಮದ ಮಾರ್ಕೆಟ್ನಲ್ಲಿ ಸ್ವೀಟ್ ಅಂಗಡಿ ಹಾಕಿಕೊಂಡು ಗೋಮಾಂಸ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಉಪ ವಿಭಾಗಾಧಿಕಾರಿಗಳ ನ್ಯಾಯಾಲಯಗಳಲ್ಲಿ ಅವಧಿ ಮೀರಿ ಬಾಕಿ ಇರುವ ಎಲ್ಲ ಪ್ರಕರಣಗಳನ್ನೂ ಮುಂದಿನ ಆರು ತಿಂಗಳೊಳಗಾಗಿ ನ್ಯಾಯಯುತ ಇತ್ಯರ್ಥಕ್ಕೆ ಒಳಪಡಿಸಬೇಕು ಎಂದು ಕಂದಾಯ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಹಿಂದೂಸ್ತಾನ್ ಮಶೀನ್ ಆ್ಯಂಡ್ ಟೂಲ್ಸ್ (ಹೆಚ್ಎಂಟಿ) ಕಾರ್ಖಾನೆಯ ಹಾಲಿ…
ಚಂದ್ರವಳ್ಳಿ ನ್ಯೂಸ್, ತುಮಕೂರು: ಕಾಂಗ್ರೆಸ್ ಪಕ್ಷ ಅಥವಾ ಸರ್ಕಾರದಲ್ಲಿ ಯಾವುದೇ ರೀತಿಯ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ಆಗುತ್ತಿಲ್ಲ. ಅದರ ಅಗತ್ಯವೂ ಇಲ್ಲ ಎಂದು ಗೃಹ ಸಚಿವ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ ಮಹತ್ವಾಕಾಂಕ್ಷಿ ಯೋಜನೆ ಯಾದ 'ಮನೆಗೊಂದು ಗ್ರಂಥಾಲಯ' ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣದಲ್ಲಿ ಉದ್ಘಾಟಿಸಿದರು. ಇದೇ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆವರಣದಲ್ಲಿ ಹಮ್ಮಿಕೊಳ್ಳಲಾದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹೆಚ್ಚುವರಿ ಕಟ್ಟಡ ನಿರ್ಮಾಣ ಶಿಲಾನ್ಯಾಸ ಹಾಗೂ ಕೆಸೆಟ್-2024 ಪ್ರಮಾಣ ಪತ್ರ ವಿತರಣಾ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: 2025-26ನೇ ಸಾಲಿನ ಬಜೆಟ್ ಮಂಡನೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, 2024-25ನೇ ಸಾಲಿನ ತೆರಿಗೆ ಸಂಗ್ರಹದಲ್ಲಿ ಈವರೆಗೂ 35% ಕೊರತೆ ಎದುರಾಗಿರುವುದು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬಾಕಿ ಹಣ ಪಾವತಿಸಿ, ಗುತ್ತಿಗೆದಾರರ ಪ್ರಾಣ ಉಳಿಸಿ ಎಂದು ಜೆಡಿಎಸ್ ಆಗ್ರಹ ಮಾಡಿದೆ. 60 ಪರ್ಸೆಂಟ್ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಪ್ರತಿಯೊಂದಕ್ಕೆ ಇಂತಿಷ್ಟು ಕಮಿಷನ್ಕೊಡಲೇಬೇಕು.…
Sign in to your account