ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸಿಬಿಎಸ್ಸಿ 10ನೇ ತರಗತಿಯ ಫಲಿತಾಂಶ ಪ್ರಕಟವಾಗಿದ್ದು ಚಿತ್ರದುರ್ಗ ನಗರದ ಬೆಂಗಳೂರು ರಸ್ತೆಯಲ್ಲಿರುವ ದಿ ಸ್ಟೆಪ್ಪಿಂಗ್ ಸ್ಟೋನ್ ಶಾಲಾ ವಿದ್ಯಾರ್ಥಿಗಳು ಬಹುದೊಡ್ಡ ಸಾಧನೆ ಮಾಡಿದ್ದಾರೆ.
ದಿ ಸ್ಟೆಪ್ಪಿಂಗ್ ಸ್ಟೋನ್ ಶಾಲೆಯ ಎಲ್ಲ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ಪರೀಕ್ಷೆಯಲ್ಲಿ ಅತ್ಯುನ್ನತ ದರ್ಜೆಯಲ್ಲಿ ಉತ್ತೀರ್ಣರಾಗುವ ಮೂಲಕ ಶೇ.100ರಷ್ಟು ಫಲಿತಾಂಶ ಪಡೆದು ಶಾಲೆಗೆ ಮತ್ತು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಕಳೆದ 8 ವರ್ಷಗಳಿಂದಲೂ ಈ ಶಾಲಾ ಮಕ್ಕಳು ಶೇ.ನೂರಷ್ಟು ಪಾಸ್ ಆಗುವ ಮೂಲಕ ದಾಖಲೆ ನಿರ್ಮಿಸಿದ್ದಾರೆ.
ಪ್ರಸಕ್ತ ಸಾಲಿನಲ್ಲಿ ಒಟ್ಟು 35 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಮೂರು ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ, 14 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 14 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ, 4 ವಿದ್ಯಾರ್ಥಿಗಲು ಉತ್ತೀರ್ಣರಾಗಿದ್ದಾರೆ.
ಈ ಪೈಕಿ ಸೌಜನ್ಯ ಎನ್.ಕವಿರಾಜ್ ಶೇ.91ರಷ್ಟು ಮತ್ತು ಯು.ವಿ ರಕ್ಷಾಶ್ರೀ ಅವರು ಶೇ.89 ರಷ್ಟು ಅಂಕಗಳನ್ನು ಪಡೆಯುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.
ದಿ ಸ್ಟೆಪ್ಪಿಂಗ್ ಸ್ಟೋನ್ ಶಾಲಾ ಆಡಳಿತ ಮಂಡಳಿಯ ಗೌರವಾಧ್ಯಕ್ಷರಾದ ಎಂ.ಎ ಸೇತುರಾಮ್, ಅಧ್ಯಕ್ಷರಾದಸೀಮಾ ಎಸ್, ಕಾರ್ಯದರ್ಶಿ ಎಸ್.ಶ್ರೀಹರ್ಷ, ಶಾಲೆಯ ಪ್ರಾಂಶುಪಾಲೆ ಶ್ವೇತಾ ಕಿರಣ್ ಅವರು ಮಕ್ಕಳನ್ನು ಅಭಿನಂದಿಸಿದ್ದಾರೆ.