ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲ್ಲೂಕಿನ ತೂಬಗೆರೆ ಹೋಬಳಿಯ ಸರ್ಕಾರಿ ಪ್ರೌಢ ಶಾಲೆಯ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರದಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಕಳೆದ ರಾತ್ರಿ ಕಿಡಿಗೇಡಿಗಳು ನಾಶ ಪಡಿಸಿರುವ ಘಟನೆ ನಡೆದಿದೆ.
ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳೆದ ರಾತ್ರಿ ಕಿಡಿಗೇಡಿಗಳು ಕೊಠಡಿಗಳ ಬಾಗಿಲು ಮುರಿದು ಆರು ಸಿಸಿಟಿವಿ ಕ್ಯಾಮರಾಗಳನ್ನು ನಾಶ ಪಡಿಸಿದ್ದಾರೆ.
ಕೃತ್ಯದಲ್ಲಿ ಭಾಗಿರುವ ಕಿಡಿಗೇಡಿಗಳನ್ನು ಶೀಘ್ರವಾಗಿ ಪತ್ತೆ ಮಾಡಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳ ಪರೀಕ್ಷೆಗೆ ಯಾವುದೇ ಅಡ್ಡಿ ಆತಂಕ ಆಗದ ರೀತಿ ನೋಡಿಕೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದರು.
ಕಳೆದ ರಾತ್ರಿ ಯಾರೋ ಕಿಡಿಗೇಡಿಗಳು ಪರೀಕ್ಷಾ ಕೇಂದ್ರಕ್ಕೆ ಬಂದು ಗೇಟ್, ಕೊಠಡಿಗಳ ಬಾಗಿಲು ಮುರಿದು, ಕೊಠಡಿಗಳಿಗೆ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಕಿತ್ತು, ಮತ್ತೆ ಜೋಡಿಸುವ ಪ್ರಯತ್ನ ಮಾಡಿದ್ದಾರೆ.
10 ಕೊಠಡಿಗಳಲ್ಲಿ 14 ಕ್ಯಾಮೆರಗಳನ್ನು ಅಳವಡಿಸಲಾಗಿತ್ತು. ಅದರಲ್ಲಿ 6 ಕ್ಯಾಮೆರಾಗಳನ್ನು ಕಿತ್ತೆಸೆದಿದ್ದಾರೆ. ಸದ್ಯ ನಾಶಪಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಮತ್ತೆ ಜೋಡಿಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅನುವು ಮಾಡಿಕೊಡಲಾಗಿದೆ.
ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಸಯೀದಾ ಅನೀಸ್ ಮುಜಾವರ, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್‌ಪೆಕ್ಟರ್ ಸಾದಿಕ್ ಪಾಷಾ ಪ್ರಕರಣ ದಾಖಲಿಸಿ ಪರಿಶೀಲನೆ ನೆಡಿಸುತ್ತಿದ್ದಾರೆ ಎಂದು ಪೂಲೀಸ್ ಮೂಲಗಳಿಂದ ತಿಳಿದು ಬಂದಿದೆ.