ಶಾಂತಿಯುತವಾಗಿ ಹಬ್ಬ ಆಚರಿಸಿ ಕಾನೂನು ಸುವ್ಯವಸ್ಥೆ ಕಾಪಾಡಿ-ಅಮರೇಶ್ ಗೌಡ

News Desk


ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಗೌರಿ ಗಣೇಶ ಹಬ್ಬದ ಹಿನ್ನೆಲೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣ ಇನ್ಸ್ಪೆಕ್ಟರ್ ಅಮರೇಶ್ ಗೌಡ ಸಾರ್ವಜನಿಕರಿಗೆ ಒಂದಿಷ್ಟು ಮಾಹಿತಿ ನೀಡಿದ್ದು, ಶಾಂತಿಯುತವಾಗಿ ಹಬ್ಬದ ಆಚರಣೆ ಮಾಡುವ ಮೂಲಕ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಮನವಿ ಮಾಡಿದ್ದಾರೆ.

ಈ ಕುರಿತು ಮಾತನಾಡಿದ ಅವರು ಪೊಲೀಸ್ ಇಲಾಖೆ, ನಗರಸಭೆ,ಬೆಸ್ಕಾಂ, ಹಾಗೂ ಅಗ್ನಿಶಾಮಕದಳದ ಸಹಯೋಗದೊಂದಿಗೆ ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಏಕಗವಾಕ್ಷಿ ವ್ಯವಸ್ಥೆ ಮಾಡಲಾಗಿದ್ದು. ಎಲ್ಲ ಇಲಾಖೆಗಳ ಅನುಮತಿಯನ್ನು ಸಾರ್ವಜನಿಕರು ಒಂದೆಡೆಯೇ ಪಡೆಯುವಂತೆ ಯೋಜನೆ ರೂಪಿಸಲಾಗಿದೆ. ಈ ಹಿಂದೆ ಪ್ರತಿ ಇಲಾಖೆಗೂ ಪ್ರತ್ಯೇಕವಾಗಿ ಅಫಿಡವಿಟ್ ಹಾಗೂ ದಾಖಲೆಗಳನ್ನು ಸಾರ್ವಜನಿಕರು ಸಲ್ಲಿಸಬೇಕಿತ್ತು ಆದರೆ ಪೋಲಿಸ್ ಅಧಿಕ್ಷಕರು ಹಾಗೂ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಸಾರ್ವಜನಿಕರ ಉಪಯೋಗಕ್ಕಾಗಿ ಸಿಂಗಲ್ ವಿಂಡೋ ಪದ್ಧತಿಯನ್ನು ಆಯೋಜನೆ ಮಾಡಲಾಗಿದೆ ಸಾರ್ವಜನಿಕರು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಮನವಿ ಮಾಡಿದರು.

 ಕ್ಯೂಆರ್ ಸ್ಕ್ಯಾನ್ ಮಾಡುವ ಮೂಲಕ ಅನುಮತಿ ಪಡೆಯಲು ಸಲ್ಲಿಸಬೇಕಾಗಿರುವ ಅಗತ್ಯ ದಾಖಲಾತಿಗಳ ಮಾಹಿತಿಯನ್ನು ಪಡೆಯಬಹುದಾಗಿದೆ. ನಿಗದಿತ ಶುಲ್ಕ ಪಾವತಿ ಮಾಡಿ ತ್ವರಿತ ಗತಿಯಲ್ಲಿ ಅನುಮತಿ ಪಡೆಯಬಹುದಾಗಿದೆ ಎಂದರು.

 ಗಣೇಶ ಪ್ರತಿಷ್ಠಾಪನೆಗೆ ಮುಖ್ಯವಾಗಿ ಅನುಸರಿಸಬೇಕಾದ ಕ್ರಮಗಳು-*ಕಾರ್ಯಕ್ರಮ ಆಯೋಜನೆ ಮಾಡುವ ಸ್ಥಳ ಯಾವುದು ವಿವಾದಕ್ಕೆ ಒಳಗಾಗಿರಬಾರದು. ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮ ಯೋಜನೆ ಮಾಡುವುದಾದರೆ ಸಾರ್ವಜನಿಕರ ಸಂಚಾರಕ್ಕೆ ಹಾಗೂ ಶಾಲಾ ಕಾಲೇಜುಗಳಿಗೆ ತೊಂದರೆಯಾಗದಂತಿರಬೇಕು. ಖಾಸಗಿ ಸ್ಥಳದಲ್ಲಿ ಕಾರ್ಯಕ್ರಮ ಯೋಜನೆ ಮಾಡುವುದಾದರೆ ಸದರಿ ಸ್ಥಳದ ಮಾಲೀಕರಿಂದ ಅನುಮತಿ ಪತ್ರ ಪಡೆಯಬೇಕು ಹಾಗೂ ಮಾಲೀಕರ ದಾಖಲಾತಿಗಳನ್ನು ಸಲ್ಲಿಸಬೇಕು.

 ಗಣೇಶ ಪ್ರತಿಷ್ಠಾಪನ ಸ್ಥಳದಲ್ಲಿ ಹಗಲು ಮತ್ತು ರಾತ್ರಿ ಪಾಳಿಯದಲ್ಲಿ ಸ್ವಯಂ ಸೇವಕರು ಕಾವಲು ಇರುವ ಮೂಲಕ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಎಚ್ಚರಿಕೆ ವಹಿಸಬೇಕು. ಕಾರ್ಯಕ್ರಮದ ಸ್ಥಳದಲ್ಲಿ ವಿವಾದಿತ ಬ್ಯಾನರ್ ಗಳು, ಅಶ್ಲೀಲ ನೃತ್ಯ, ಅಶ್ಲೀಲ ಹಾಡುಗಳನ್ನು ಹಾಕುವುದು ನಿರ್ಬಂಧಿಸಿದೆ.

 ಬೆಳಿಗ್ಗೆ 6:00ಯಿಂದ ರಾತ್ರಿ 10:00 ವರೆಗೆ ಮಾತ್ರ ಧ್ವನಿವರ್ಧಕ ಬಳಸಲು ಅವಕಾಶ ಕಲ್ಪಿಸಲಾಗಿದೆ. ರಾತ್ರಿ 10:00 ನಂತರ ಯಾವುದೇ ಕಾರಣಕ್ಕೂ ಧ್ವನಿವರ್ಧಕ ಬಳಸುವಂತಿಲ್ಲ. ಸರ್ಕಾರದ ಆದೇಶದಂತೆ ಡಿಜೆ ಬಳಸುವಂತಿಲ್ಲ, ಈ ಕುರಿತು ನಿರ್ಬಂಧ ಹೇರಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಪಟಾಕಿ ಸಿಡಿಸುವಂತಿಲ್ಲ, ಸಾರ್ವಜನಿಕರಿಗೆ ತೊಂದರೆಯಾಗದ ಸ್ಥಳಗಳಲ್ಲಿ, ಹಸಿರು ಪಟಾಕಿ ಬಳಸಲು ಅವಕಾಶ ಕಲ್ಪಿಸಲಾಗಿದೆ.

ಗಣೇಶ ಮೂರ್ತಿ ವಿಸರ್ಜನೆಯನ್ನು ರಾತ್ರಿ 10 ಗಂಟೆ ಒಳಗೆ ನಿಗದಿತ ಪ್ರದೇಶದಲ್ಲಿ ನೆರವೇರಿಸುವಂತೆ ಸೂಚಿಸಲಾಗಿದೆ. ಕಾರ್ಯಕ್ರಮವನ್ನು ಅನ್ಯಧಾರ್ಮಿಯರಿಗೆ ತೊಂದರೆಯಾಗದಂತೆ,ನೆರವೇರಿಸುವ ಮೂಲಕ ಸಹಕರಿಸಲು ಕೋರಿದ್ದಾರೆ.

 

- Advertisement -  - Advertisement - 
Share This Article
error: Content is protected !!
";