ಮಾತೃಶ್ರೀ ವಿದ್ಯಾಸಂಸ್ಥೆಯಲ್ಲಿ ಗಾಂಧಿ ಹಾಗೂ ಶಾಸ್ತ್ರಿಯವರ ಜಯಂತಿ ಆಚರಣೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಗರದ ಸ್ಟೇಡಿಯಂ ರಸ್ತೆಯಲ್ಲಿರುವ ಮಾತೃಶ್ರೀ ವಿದ್ಯಾಸಂಸ್ಥೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್‌ಬಹದ್ದೂರ್‌ಶಾಸ್ತ್ರಿಯವರ ಜಯಂತಿಯನ್ನು ಆಚರಿಸಲಾಯಿತು.

ಸಂಸ್ಥೆಯ ಸಂಸ್ಥಾಪಕ ಡಾ.ವಿ.ಪ್ರಶಾಂತ್ ಮಾತನಾಡಿ ಮಹಾತ್ಮಗಾಂಧಿ ಮತ್ತು ಲಾಲ್‌ಬಹದ್ದೂರ್‌ಶಾಸ್ತ್ರಿ ಇವರುಗಳು ದೇಶಕ್ಕಾಗಿ ಹೋರಾಡಿ ಪ್ರಾಣ ತ್ಯಾಗ ಮಾಡಿದ್ದಾರೆ.

ಇಂದಿನ ಪೀಳಿಗೆ ಈ ಇಬ್ಬರು ಮಹನೀಯರ ವಿಚಾರವನ್ನು ತಿಳಿದುಕೊಂಡು ದೇಶಭಕ್ತಿ ಮೈಗೂಡಿಸಿಕೊಳ್ಳುವಂತೆ ತಿಳಿಸಿದರು.

ಜಯಂತಿಯಲ್ಲಿ ಮಾತೃಶ್ರಿ ಸಂಸ್ಥೆಯ ಶಿಕ್ಷಕ ವೃಂದ ಹಾಗೂ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

 

 

 

- Advertisement -  - Advertisement -  - Advertisement - 
Share This Article
error: Content is protected !!
";