ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಗರ ಬಸ್ ನಿಲ್ದಾಣದ ಆಟೋ ಚಾಲಕರ ಸಂಘ ಹಾಗೂ ಪ್ರಬುದ್ಧ ಕರ್ನಾಟಕ ಭೀಮ ಸೇನೆ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಕಾರ್ಯಕ್ರಮವನ್ನು ಮಹಿಳಾ ಪೊಲೀಸ್ ಠಾಣೆ ಆರಕ್ಷಕ ನೀರಿಕ್ಷಕರಾದ ನವೀನ್ ಕುಮಾರ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಆಟೋ ಚಾಲಕರ ಸಂಘ, ಪ್ರಬುದ್ಧ ಕರ್ನಾಟಕ ಭೀಮ ಸೇನೆಯ ಪದಾಧಿಕಾರಿಗಳು ಭಾಗವಹಿಸಿದ್ದರು.

