ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿಯು ತನ್ನ ಹತ್ತನೇ ವರ್ಷದ ಸಂಸ್ಥಾಪನ ದಿನಾಚರಣೆ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ನಿರಂತರ ಅನ್ನದಾಸೋಹ ಸಮಿತಿಯ ಸಹಯೋಗದೊಂದಿಗೆ ನಿರ್ಗತಿಕ ಕಡುಬಡವರಿಗೆ ಆಹಾರ ವಿತರಣೆ ಮಾಡುವ ಮೂಲಕ ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳನ್ನು ಹಾಗೂ ಸಿಹಿ ವಿತರಣೆ ಮಾಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿತು.
ತಾಲೂಕಿನ ದರ್ಗಾ ಜೋಗಹಳ್ಳಿಯಲ್ಲಿ ಆಯೋಜನೆ ಮಾಡಲಾಗಿದ್ದ 77ನೇ ಗಣರಾಜ್ಯೋತ್ಸವ ಹಾಗೂ ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿಯ 10ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಸಮಿತಿಯ ಸಂಸ್ಥಾಪಕರು, ಖ್ಯಾತ ವಕೀಲರು ಆದ ರವಿ ಮಾವಿನಕುಂಟೆ ಭಾಗವಹಿಸಿ ಮಾತನಾಡಿದರು.
ನಮ್ಮ ಸಂಘಟನೆಯ ವಾರ್ಷಿಕೋತ್ಸವ ಕಾರ್ಯಕ್ರಮವು ಅರ್ಥಪೂರ್ಣವಾಗಿ ಮೂಡಿಬಂದಿದೆ. ನಿಸ್ವಾರ್ಥ ಸೇವಾ ಮನೋಭಾವದಿಂದ ನಿರಂತರ ವಿಶೇಷ ಕಾರ್ಯಕ್ರಮಗಳ ರೂಪಿಸುವ ಮೂಲಕ ಸಾರ್ವಜನಿಕರಿಗೆ ಕೈಲಾದ ಸೇವೆಯನ್ನು ನಮ್ಮ ಸಮಿತಿ ಮಾಡುತ್ತಿರುವುದು ಸಂತಸದ ವಿಷಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಪ್ರಮುಖವಾಗಿ ನಿರಾಶ್ರಿತ ಕಡುಬಡವರಿಗೆ ಆಹಾರ ವಿತರಣೆ ಮಾಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಗಿದೆ.ಸದಾ ವಿಶೇಷ ಸೇವೆಗಳನ್ನು ಸಲ್ಲಿಸುವ ಮೂಲಕ ಸಮಾಜಕ್ಕೆ ಮಾದರಿ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿರುವ ಸಮಿತಿಯ ಎಲ್ಲ ಸದಸ್ಯರಿಗೂ, ಹಾಗೂ ನಮ್ಮ ಸಮಿತಿಯ ಎಲ್ಲಾ ಕಾರ್ಯಕ್ರಮಗಳಿಗೂ ಸದಾ ಬೆಂಬಲವಾಗಿ ಶ್ರಮಿಸುವ ಮಲ್ಲೇಶ್ ಅವರಿಗೆ ಧನ್ಯವಾದಗಳು ಅರ್ಪಿಸುತ್ತೇನೆ ಎಂದರು.
ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಸುಬ್ರಮಣಿ ಮಾತನಾಡಿ ಕನ್ನಡ ನಾಡು, ಜಲ, ಭಾಷೆ ವಿಚಾರವಾಗಿ ಸಮಿತಿಯ ಸಂಸ್ಥಾಪಕರಾದ ರವಿ ಮಾವಿನಕುಂಟೆ ಅವರ ಮಾರ್ಗದರ್ಶನದಲ್ಲಿ ಹೋರಾಟಗಳನ್ನು ನಡೆಸಿಕೊಂಡು ಬರುತ್ತಿದ್ದೇವೆ . ಅಲ್ಲದೆ ವಿವಿಧ ಸಾಮಾಜಿಕ ಕಾರ್ಯಗಳಲ್ಲೂ ನಮ್ಮ ಸಮಿತಿ ತೊಡಗಿರುವುದು ವಿಶೇಷ ಸದಾ ನೊಂದವರ ಧ್ವನಿಯಾಗಿ ಅನ್ಯಾಯದ ವಿರುದ್ಧ ಹೋರಾಟ ನಡೆಸುವುದು ನಮ್ಮ ಸಮಿತಿಯ ಹೆಮ್ಮೆ ಎಂದರೆ ತಪ್ಪಾಗಲಾರದು.
ನಮ್ಮ ಸಮಿತಿಯ ಹತ್ತನೇ ವಾರ್ಷಿಕೋತ್ಸವ ಸಂಭ್ರಮದಲ್ಲಿ ವಿಶೇಷವಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ಉಪಯುಕ್ತ ಕಲಿಕಾ ಪರಿಕರಗಳನ್ನು ವಿತರಣೆ ಮಾಡುವ ಮೂಲಕ ಮಕ್ಕಳೊಂದಿಗೆ ಇಂದಿನ ದಿನವನ್ನು ಅರ್ಥಪೂರ್ಣವಾಗಿ ಕಳೆದಿದ್ದೇವೆ. ಅಲ್ಲದೆ ವಯೋವೃದ್ಧರಿಗೆ ಕಡು ಬಡವರಿಗೆ ಆಹಾರ ವಿತರಣೆ ಮಾಡುವ ಮೂಲಕ ನಮ್ಮ ಸಂಭ್ರಮವನ್ನು ಹಂಚಿಕೊಂಡಿದ್ದೇವೆ ಹತ್ತು ವರ್ಷಗಳು ಕಳೆದಿವೆ ನಮ್ಮ ಜವಾಬ್ದಾರಿ ಹೆಚ್ಚಾಗಿದೆ ನಮ್ಮ ಸಮಿತಿ ವತಿಯಿಂದ ಸಮಾಜಕ್ಕೆ ಮತ್ತಷ್ಟು ಉತ್ತಮ ಕಾರ್ಯಗಳನ್ನು ಲಭಿಸುವಂತಗಲಿ ಎಂದು ಈ ಸಂದರ್ಭದಲ್ಲಿ ಹಾರೈಸುತ್ತೇನೆ ಎಂದರು.
ಕಾರ್ಯಕ್ರಮದಲ್ಲಿ ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಸುಬ್ರಮಣಿ, ಕಾರ್ಮಿಕ ಘಟಕದ ಅಧ್ಯಕ್ಷ ಆನಂದ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ ಕೃಷ್ಣಮೂರ್ತಿ,ತಾಲ್ಲೂಕು ಅಧ್ಯಕ್ಷ ಶ್ರೀರಾಮ್, ಬಸವರಾಜ್ ಎಸ್ ಎಂ ಗೊಲ್ಲಹಳ್ಳಿ, ಅನಿಲ್ ರೆಡ್ಡಿ,ವಿಠಲ್ ರಾವ್, ದೇಶಪಾಂಡೆ, ರಮೇಶ್ ಸೊಣಪನಹಳ್ಳಿ, ಶಿವು ತಿಪ್ಪಾಪುರ,ಪರ್ದೀನ್ ಖಾನ್,ಮುನೀರ್ ಬಾಬು ಎಸ್. ಎನ್, ರಂಗಸ್ವಾಮಿ, ಚಂದ್ರಶೇಖರ್ ಸೇರಿದಂತೆ ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿ ಪದಾಧಿಕಾರಿಗಳು ಹಾಜರಿದ್ದರು.

